ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್: 4 ವರ್ಷದ ಬಾಲಕನನ್ನು ಕಚ್ಚಿ ಕೊಂದ ಬೀದಿ ನಾಯಿಗಳು

Last Updated 21 ಫೆಬ್ರುವರಿ 2023, 10:36 IST
ಅಕ್ಷರ ಗಾತ್ರ

ಹೈದರಾಬಾದ್: 4 ವರ್ಷದ ಬಾಲಕನನ್ನು ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿ ಕೊಂದಿರುವ ಭೀಕರ ಘಟನೆ ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ನಡೆದಿದೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಜನರನ್ನು ದಿಗ್ಭ್ರಮೆಗೊಳಿಸಿದೆ.

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ಇದ್ದಕ್ಕಿದ್ದಂತೆ ದಾಳಿ ಮಾಡುತ್ತವೆ. ಈ ಸಂದರ್ಭ ಬಾಲಕ ಕೆಳಗೆ ಬೀಳುತ್ತಾನೆ. ಬಳಿಕ, ಪದೇ ಪದೇ ನಾಯಿಗಳು ಆತನನ್ನು ಕಚ್ಚುತ್ತಿರುವ ದೃಶ್ಯ ವಿಡಿಯೊದಲ್ಲಿದೆ.

ಬಾಲಕ ಕೊಂಡೊಯ್ಯತ್ತಿದ್ದ ಆಹಾರ ಪೊಟ್ಟಣದ ವಾಸನೆ ಗ್ರಹಿಸಿದ ನಾಯಿಗಳು ದಾಳಿ ಮಾಡಿವೆ ಎಂದು ಹೈದರಾಬಾದ್ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾನುವಾರ, ಅಂಬರ್‌ಪೇಟೆಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಂದೆ ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟೊತ್ತಿಗೆ ಬಾಲಕ ಮೃತಪಟ್ಟಿದ್ದ.

ಬಾಲಕನ ತಂದೆ ಆಟೊಮೊಬೈಲ್ ಕಂಪನಿಯೊಂದರ ಉದ್ಯೋಗಿಯಾಗಿದ್ದು, ಕುಟುಂಬ ನಿಜಾಮಾಬಾದ್‌ ಮೂಲದ್ದಾಗಿದೆ ಎಂದೂ ಅಧಿಕಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT