ಶುಕ್ರವಾರ, ಫೆಬ್ರವರಿ 26, 2021
32 °C

ಕೇರಳ: 40 ವರ್ಷದ ಆನೆಯ ಶವ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಆನೆಗಳು–ಸಾಂದರ್ಭಿಕ ಚಿತ್ರ

ತಿರುವನಂತಪುರಂ: ವಿಥುರಾದ ಕಲ್ಲಾರ್‌ ಬಳಿ 40 ವರ್ಷದ ಆನೆಯ ಶವ ಶನಿವಾರ ಪತ್ತೆಯಾಗಿದೆ. ಈ ವೇಳೆ 9 ತಿಂಗಳ ಆನೆ ಮರಿ, ತನ್ನ ತಾಯಿಯನ್ನು ಎಚ್ಚರಿಸಲು ಪ್ರಯತ್ನಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು ಎಂದು ಅಧಿಕಾರಿಗಳು ತಿಳಿಸಿದರು.

ಖಾಸಗಿ ತೋಟವೊಂದರಲ್ಲಿ ಆನೆಯ ಶವ ಪತ್ತೆಯಾಗಿತ್ತು. ಈ ಬಗ್ಗೆ ರಬ್ಬರ್‌ ಟ್ಯಾಪರ್‌ಗಳು ಪೊಲೀಸರಿಗೆ ತಿಳಿಸಿದರು. ಪೊಲೀಸರು ಈ ಮಾಹಿತಿಯನ್ನು ಅರಣ್ಯ ಅಧಿಕಾರಿಗಳಿಗೆ ರವಾನಿಸಿದರು.

‘ತಾಯಿ ಆನೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಆನೆ, ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದಾಗಿ ಮೃತಪಟ್ಟಿರುವುದು ಪರೀಕ್ಷೆಯಲ್ಲಿ ತಿಳಿದುಬಂದಿದೆ’ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಯಿರಿ: ಆನೆ ದುರಂತದ ಹಿನ್ನೆಲೆಯಲ್ಲಿ ಸಿಜೆಐಗೆ ಪತ್ರ

‘ಆನೆ ಮರಿ ತನ್ನ ತಾಯಿಯ ಬಳಿ ಯಾರನ್ನು ಬರಲು ಬಿಡುತ್ತಿರಲಿಲ್ಲ. ಮಧ್ಯಾಹ್ನ 12 ಗಂಟೆಯ ಬಳಿಕ  ಮರಿಯನ್ನು ಕುತ್ತೂರ್‌ನಲ್ಲಿರುವ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು’ ಎಂದು ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು