ಸೋಮವಾರ, ಸೆಪ್ಟೆಂಬರ್ 27, 2021
28 °C

ಕೇರಳದ 41 ಮಂದಿ ಕಾಬೂಲ್‌ನಲ್ಲಿ ಅತಂತ್ರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರಂ: ಮಹಿಳೆಯರು ಮತ್ತು ಮಕ್ಕಳು ಒಳಗೊಂಡಂತೆ ಕನಿಷ್ಠ 41 ಮಂದಿ ಮಲಯಾಳಿಗರು ತಾಲಿಬಾನ್ ನಿಯಂತ್ರಣದಲ್ಲಿರುವ ಕಾಬೂಲ್‌ನಲ್ಲಿ ಸಿಲುಕಿದ್ದಾರೆ ಎಂದು ಕೇರಳ ಸರ್ಕಾರ ಮಂಗಳವಾರ ತಿಳಿಸಿದೆ.

ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದೂ ಮನವಿ ಮಾಡಿದೆ. ಅನಿವಾಸಿ ಕೇರಳಿಗರ ಕಲ್ಯಾಣಕ್ಕೆ ಕೆಲಸ ಮಾಡುವ ಸರ್ಕಾರದ ಇಲಾಖೆ ‘ನೋಕ್ರಾ’ಗೆ ಬಂದಿರುವ ಆತಂಕಭರಿತ ದೂರವಾಣಿ ಕರೆಗಳ ಹಿನ್ನೆಲೆಯಲ್ಲಿ ಸರ್ಕಾರ, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆಯಲಾಗಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ನಿರ್ದೇಶನದಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕೆ.ಎಳಂಗೋವನ್‌, ನೋಕ್ರಾ ಸಿಇಒ ಹರಿಕೃಷ್ಣನ್‌ ನಂಬೂಥಿರಿ ಅವರು ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪ್ರತ್ಯೇಕ ಪತ್ರ ಬರೆದಿದ್ದಾರೆ.

ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದವರು, ಮಹಿಳೆಯರು, ಮಕ್ಕಳು ಒಳಗೊಂಡು ಸುಮಾರು 41 ಮಂದಿ ಕಾಬೂಲ್‌ನಲ್ಲಿ ಸಿಲುಕಿದ್ದಾರೆ. ಅಲ್ಲಿ ಅತಂತ್ರರಾಗಿರುವ ಭಾರತೀಯರನ್ನು ಗುರುತಿಸಿ ತಾಲಿಬಾನಿಗಳು ಪಾಸ್‌ಪೋರ್ಟ್‌ ಮತ್ತು ಇತರೆ ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದೂ ಕೇಂದ್ರಕ್ಕೆ ಮಾಹಿತಿ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು