ಬುಧವಾರ, ಡಿಸೆಂಬರ್ 8, 2021
25 °C

ಕೇರಳ: ಕೋವಿಡ್‌ನಿಂದ 41 ಗರ್ಭಿಣಿಯರು ಸಾವು, 149 ಮಂದಿ ಆತ್ಮಹತ್ಯೆ- ವೀಣಾ ಜಾರ್ಜ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರಂ: ಒಂದೂವರೆ ವರ್ಷಗಳ ಹಿಂದೆ ಕೇರಳದಲ್ಲಿ ಕೋವಿಡ್‌ ಕಾಣಿಸಿಕೊಂಡಾಗಿನಿಂದ ಇಲ್ಲಿವರೆಗೆ  41 ಗರ್ಭಿಣಿಯರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಬುಧವಾರ ಇಲ್ಲಿ ತಿಳಿಸಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಟಿ.ಜೆ. ವಿನೋದ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೋವಿಡ್‌ ದೃಢಪಟ್ಟವರಲ್ಲಿ 149 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದರು.

ಕಾಂಗ್ರೆಸ್‌ನ ಮ್ಯಾಥ್ಯೂ ಕುಜಲನಾಡನ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ‘ವರದಿಗಳ ಪ್ರಕಾರ, ರಾಜ್ಯ ಆರೋಗ್ಯ ಇಲಾಖೆಯು ಇತ್ತೀಚೆಗೆ ನಡೆಸಿದ ಸೆರೊ ಪ್ರೈವೆಲೆನ್ಸ್ ವೈಜ್ಞಾನಿಕ ಅಧ್ಯಯನದ ಸಂಶೋಧನೆಗಳು ಮತ್ತು ಐಸಿಎಂಆರ್‌ನ ಇಂಥದ್ದೇ ಸಮೀಕ್ಷೆಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು