ಗುರುವಾರ , ಜೂನ್ 24, 2021
25 °C

Covid-19 India Updates: ದಾಖಲೆಯ 4,14,188 ಹೊಸ ಪ್ರಕರಣ, 3,915 ಸಾವು

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,915 ಮಂದಿ ಕೋವಿಡ್‌ನಿಂದ ಪ್ರಾಣ ಕಳೆದುಕೊಂಡಿದ್ದು, ದಾಖಲೆಯ 4,14,188 ಹೊಸ ಪ್ರಕರಣ ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಲಾಗಿದೆ.

ಹೀಗಾಗಿ, ದೇಶದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 2,34,083ಕ್ಕೆ ಏರಿದ್ದು, ಸಾವಿನ ಪ್ರಮಾಣ ಶೇ. 1.09 ರಷ್ಟಾಗಿದೆ.

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 36,45,164 ಕ್ಕೆ ಹೆಚ್ಚಳವಾಗಿದ್ದು, ಒಟ್ಟು ಸೋಂಕಿತರ ಪೈಕಿ ಶೇ. 16.92 ರಷ್ಟು ಸಕ್ರಿಯ ಪ್ರಕರಣಗಳಿವೆ.

ಈವರೆಗೆ 1,76,12,351 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿ ಸೋಂಕಿತರ ಸಂಖ್ಯೆ 2,14,91,598ಕ್ಕೆ ಏರುವ ಮೂಲಕ ವಿಶ್ವದಲ್ಲೇ ಎರಡನೇ ಅತ್ಯಧಿಕ ಕೋವಿಡ್ ಸೋಂಕಿತರನ್ನು ಹೊಂದಿರುವ ದೇಶವಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು