ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಜೈಲುಗಳಲ್ಲಿ 4.27 ಲಕ್ಷ ಮಂದಿ ವಿಚಾರಣಾಧೀನ ಕೈದಿಗಳು: ಕೇಂದ್ರ ಸರ್ಕಾರ

Last Updated 21 ಮಾರ್ಚ್ 2023, 13:57 IST
ಅಕ್ಷರ ಗಾತ್ರ

ನವದೆಹಲಿ: 2021 ಡಿಸೆಂಬರ್ 31ರ ವರೆಗಿನ ಅಂಕಿ –ಅಂಶಗಳ ಪ್ರಕಾರ ದೇಶದ ವಿವಿಧ ಜೈಲುಗಳಲ್ಲಿ 4.27 ಲಕ್ಷ ಮಂದಿ ವಿಚಾರಣಾಧೀನ ಕೈದಿಗಳಿದ್ದಾರೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.

2014ರ ಡಿಸೆಂಬರ್ 31ರಂದು 2.82 ಲಕ್ಷ ಇದ್ದ ವಿಚಾರಣಾಧೀನ ಕೈದಿಗಳ ಸಂಖ್ಯೆಯು 2021ರ ಡಿಸೆಂಬರ್ 31ಕ್ಕೆ 4.27ಲಕ್ಷಕ್ಕೆ ಏರಿಕೆಯಾಗಿದೆ ಎಂದೂ ವಿವರಿಸಿದ್ದಾರೆ.

ಇವರಲ್ಲಿ 90,037 ಮಂದಿ ಪರಿಶಿಷ್ಟ ಜಾತಿಗೆ ಸೇರಿದ ಮತ್ತು 42,211 ಮಂದಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿಚಾರಣಾಧೀನ ಕೈದಿಗಳಿದ್ದಾರೆ. 1.51 ಲಕ್ಷ ಮಂದಿ ಇತರ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ ಎಂದೂ ಸಚಿವರು ವಿವರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT