ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಒಂದೇ ಸಂಸ್ಥೆಯ 43 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್‌

Last Updated 6 ಡಿಸೆಂಬರ್ 2021, 6:40 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣದ ಕರೀಂನಗರ ಜಿಲ್ಲೆಯ ಬೊಮ್ಮಕಲ್‌ನಲ್ಲಿರುವ ಚಲ್ಮೇಡಾ ಆನಂದ್ ರಾವ್ ವೈದ್ಯಕೀಯ ಸಂಸ್ಥೆಯ ಕನಿಷ್ಠ 43 ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಒಂದು ವಾರದ ಹಿಂದೆ ನಡೆದಿದ್ದ ಕಾಲೇಜು ವಾರ್ಷಿಕ ದಿನಾಚರಣೆಯು ಸೋಂಕು ಹರಡಲು ಕಾರಣವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತರಗತಿಗಳನ್ನು ಮುಚ್ಚುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಈ ವಿಚಾರವಾಗಿ ಸುದ್ದಿವಾಹಿನಿ ಎನ್‌ಡಿಟಿವಿಗೆ ಪ್ರತಿಕ್ರಿಯಿಸಿರುವ ಕರೀಂನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಜುವೇರಿಯಾ, ‘ವಾರ್ಷಿಕ ದಿನಾಚರಣೆ ಕುರಿತ ಮಾಹಿತಿಯನ್ನು ಸಂಸ್ಥೆಯ ನಮಗೆನೀಡಿರಲಿಲ್ಲ. ಸಮಾರಂಭದಲ್ಲಿ ಹಲವರು ಮಾಸ್ಕ್ ಧರಿಸಿರಲಿಲ್ಲ ಎನ್ನಲಾಗಿದೆ. ಇದು ಸೋಂಕು ಹರಡಲು ಕಾರಣವಾಗಿರಬಹುದು‘ ಎಂದು ಹೇಳಿದ್ದಾರೆ.

‘ಇದುವರೆಗೆ 200 ಜನರನ್ನು ಪರೀಕ್ಷಿಸಲಾಗಿದೆ. ಕ್ಯಾಂಪಸ್‌ನಲ್ಲಿರುವ ಎಲ್ಲಾ ಜನರನ್ನು ಪರೀಕ್ಷಿಸಲು ಸೋಮವಾರ ವಿಶೇಷ ಶಿಬಿರವನ್ನು ಏರ್ಪಡಿಸಿದ್ದೇವೆ‘ ಎಂದು ಡಾ.ಜುವೇರಿಯಾ ಹೇಳಿದ್ದಾರೆ.

24 ಗಂಟೆಗಳಲ್ಲಿ ದೇಶದಾದ್ಯಂತ 8,306 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 211 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT