ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಗಳಿಗೆ 45.37 ಕೋಟಿ ಕೋವಿಡ್‌ ಲಸಿಕೆ ಪೂರೈಕೆ

Last Updated 25 ಜುಲೈ 2021, 6:06 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ45.37 ಕೋಟಿ (45,37,70,580) ಡೋಸ್‌ ಲಸಿಕೆ ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಲಭ್ಯ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ8 ರವರೆಗೆ ಒಟ್ಟು42,08 (42,08,32,021) ಡೋಸ್‌ ಲಸಿಕೆ ಬಳಕೆಯಾಗಿದೆ. ಹೀಗಾಗಿ ಇನ್ನೂ3.29 ಕೋಟಿ (3,29,38,559) ಡೋಸ್‌ ಲಸಿಕೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ ಲಭ್ಯವಿದೆ ಎಂದು ಇಲಾಖೆ ತಿಳಿಸಿದೆ.

ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ ಒಟ್ಟು 39,742 ಹೊಸ ಪ್ರಕರಣಗಳು ವರದಿಯಾಗಿದ್ದು, 39,972 ಮಂದಿ ಗುಣಮುಖರಾಗಿದ್ದಾರೆ. 535 ಸೋಂಕಿತರು ಮೃತಪಟ್ಟಿದ್ದಾರೆ.

ಸೋಂಕಿನಿಂದಈವರೆಗೆ ಸಾವಿಗೀಡಾದವರ ಸಂಖ್ಯೆ 4,20,551ಕ್ಕೆ ಏರಿಕೆಯಾಗಿದ್ದು, 3.05 ಕೋಟಿ(3,05,43,138) ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 4,08,212 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT