ಶನಿವಾರ, ಮೇ 28, 2022
24 °C

18 ತಿಂಗಳ ನಂತರ ಜಮ್ಮು ಕಾಶ್ಮೀರದಲ್ಲಿ 4ಜಿ ಇಂಟರ್‌ನೆಟ್‌ ಸೇವೆ ಮರು ಸ್ಥಾಪನೆ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: 18 ತಿಂಗಳ ನಂತರ ಜಮ್ಮು ಕಾಶ್ಮೀರದಲ್ಲಿ 4ಜಿ- ಹೈಸ್ಪೀಡ್‌ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಮರುಸ್ಥಾಪಿಸಲಾಗಿದೆ.

ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು 2019ರ ಆಗಸ್ಟ್‌ನಲ್ಲಿ ರದ್ದುಗೊಳಿಸಿದ ನಂತರ ಅಲ್ಲಿ ಹೈಸ್ಪೀಡ್‌ ಇಂಟರ್‌ನೆಟ್‌ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಈ ಕುರಿತು ಶುಕ್ರವಾರ ಸಂಜೆ ಟ್ವೀಟ್‌ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಆಡಳಿತದ ವಕ್ತಾರ ರೋಹಿತ್ ಕನ್ಸಾಲ್ '4ಜಿ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಇಡೀ ಜಮ್ಮು ಮತ್ತು ಕಾಶ್ಮೀರದಲ್ಲಿ ಮರಳಿ ಸ್ಥಾಪಿಸಲಾಗುತ್ತಿದೆ' ಎಂದು ಮಾಹಿತಿ ನೀಡಿದ್ದರು.

ಮೂಲಗಳ ಪ್ರಕಾರ, ಇಂಟರ್‌ನೆಟ್‌ ಸೇವೆಗಳು ಶುಕ್ರವಾರ ಮಧ್ಯರಾತ್ರಿಯಿಂದ ಪುನರಾರಂಭಗೊಳ್ಳುವ ಸಾಧ್ಯತೆಯಿದೆ.
2019ರ ಆಗಸ್ಟ್‌5ರಂದು ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನಗಳನ್ನು ರದ್ದುಪಡಿಸಿ, ಜಮ್ಮು ಕಾಶ್ಮೀರ ಮತ್ತು ಲಡಾಕ್‌ ಅನ್ನು ವಿಭಜಿಸಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಲಾಗಿತ್ತು. ಅಂದಿನಿಂದ ಅಲ್ಲಿ ಇಂಟರ್‌ನೆಟ್‌ ಸೇವೆಗಳಲ್ಲಿ ವತ್ಯಯ ಉಂಟಾಗಿತ್ತು.

ಕಳೆದ ವರ್ಷ ಆಗಸ್ಟ್‌ನಲ್ಲಿ ಕಾಶ್ಮೀರದ ಗಂದರ್‌ಬಾಲ್ ಮತ್ತು ಜಮ್ಮು ಪ್ರದೇಶದ ಉಧಂಪುರ್ ಎಂಬ ಎರಡು ಜಿಲ್ಲೆಗಳಲ್ಲಿ ಹೈಸ್ಪೀಡ್ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಮರುಸ್ಥಾಪಿಸಲಾಗಿತ್ತು.

2020ರ ಆರಂಭದಲ್ಲಿ 2 ಜಿ ಇಂಟರ್‌ನೆಟ್‌ ಸೇವೆಗಳನ್ನು ಮಾತ್ರ ಮರುಸ್ಥಾಪನೆ ಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು