ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಕಿಪಾಕ್ಸ್: ದೇಶದ 4ನೇ ಪ್ರಕರಣ ದೆಹಲಿಯಲ್ಲಿ ಪತ್ತೆ

Last Updated 24 ಜುಲೈ 2022, 6:34 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಮಂಕಿಪಾಕ್ಸ್ ವೈರಸ್‌ನ ನಾಲ್ಕನೇ ಪ್ರಕರಣ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾನುವಾರ ಪತ್ತೆಯಾಗಿದೆ.

ಯಾವುದೇ ವಿದೇಶ ಪ್ರಯಾಣದ ಹಿನ್ನೆಲೆಯಿಲ್ಲದ 24 ವರ್ಷದ ವ್ಯಕ್ತಿಗೆ ಭಾನುವಾರ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಮಂಕಿಪಾಕ್ಸ್ ವೈರಾಣುವಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಸೋಂಕಿತ ವ್ಯಕ್ತಿಯನ್ನು ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಂಕಿಪಾಕ್ಸ್ ಪತ್ತೆಯಾಗಿ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ (ಎನ್‌ಐವಿ) ರವಾನಿಸಲಾಗಿತ್ತು.

ಸೋಂಕಿತ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕ ಹೊಂದಿದವರನ್ನು ಗುರುತಿಸಿ ಪ್ರತ್ಯೇಕವಾಸಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಮಂಕಿಪಾಕ್ಸ್ ವೈರಸ್‌ನ ಮೊದಲ ಮೂರು ಪ್ರಕರಣಗಳು ಕೇರಳದಲ್ಲಿ ವರದಿಯಾಗಿದ್ದವು.

ಮಂಕಿಪಾಕ್ಸ್ 75ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆಯು 'ಜಾಗತಿಕ ಆರೋಗ್ಯ ತುರ್ತುಸ್ಥಿತಿ' ಎಂದು ಶನಿವಾರ ಘೋಷಿಸಿತ್ತು. ಜಾಗತಿಕವಾಗಿ 16,000ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ಈ ವರೆಗೆ ಐದು ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT