ಸೋಮವಾರ, ಸೆಪ್ಟೆಂಬರ್ 27, 2021
28 °C

ಅಕ್ರಮ ಪ್ರವೇಶ: ಬಾಂಗ್ಲಾದ ಐವರು ಪ್ರಜೆಗಳು ಬಿಜಿಬಿಗೆ ಹಸ್ತಾಂತರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಧುಬ್ರಿ, ಅಸ್ಸಾಂ: ‘ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಿದ ಬಾಂಗ್ಲಾದೇಶದ ಹತ್ತು ಪ್ರಜೆಗಳ ಪೈಕಿ ಐವರನ್ನು ಸೌಹಾರ್ದತೆಯ ಸಂಕೇತವಾಗಿ ಬಾಂಗ್ಲಾದೇಶದ ಗಡಿ ಕಾವಲು ಪಡೆಗೆ (ಬಿಜಿಬಿ) ಹಸ್ತಾಂತರಿಸಲಾಗಿದೆ’ ಎಂದು ಬಿಎಸ್‌ಎಫ್‌ ಅಧಿಕಾರಿಗಳು ಭಾನುವಾರ ತಿಳಿಸಿದರು.

ಪಶ್ಚಿಮ ಬಂಗಾಳದ ಕೂಚ್‌ಬಿಹಾರ ಜಿಲ್ಲೆಯ ಮೂಲಕ ಭಾರತದೊಳಗೆ ಪ್ರವೇಶಿಸಲು ಯತ್ನಿಸಿದ ಐದು ಮಕ್ಕಳು, ನಾಲ್ವರು  ಮಹಿಳೆಯರು ಸೇರಿದಂತೆ ಹತ್ತು ಮಂದಿಯನ್ನು ಸಬ್ರಿ ಗಡಿ ಬಳಿ ಬಿಎಸ್‌ಎಫ್‌ ಪಡೆ ಶನಿವಾರ ಬಂಧಿಸಿತ್ತು.

‘ಈ ಪೈಕಿ ಐವರನ್ನು ಸಂಪೂರ್ಣ ಪರಿಶೀಲನೆಯ ಬಳಿಕ ಶನಿವಾರ ಸಂಜೆ ಬಿಜಿಬಿಗೆ ಹಸ್ತಾಂತರಿಸಲಾಯಿತು. ಇನ್ನುಳಿದ ಐವರನ್ನು ವಿಚಾರಣೆಗಾಗಿ ಸ್ಥಳೀಯ ಪೊಲೀಸರ ವಶಕ್ಕೆ ನೀಡಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು