ಭಯೋತ್ಪಾದನೆ ಸಂಘಟನೆಗಳ ಜತೆ ಸಂಪರ್ಕದ ಶಂಕೆ
ದೆಹಲಿಯಲ್ಲಿ ಎನ್ಕೌಂಟರ್: ಐವರ ಬಂಧನ

ನವದೆಹಲಿ: ಪೂರ್ವ ದೆಹಲಿಯ ಶಾಕಾರ್ಪುರ್ ಪ್ರದೇಶದಲ್ಲಿ ಸೋಮವಾರ ನಡೆದ ಎನ್ಕೌಂಟರ್ ಬಳಿಕ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಕೆಲವರು ಭಯೋತ್ಪಾದನೆ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಶಂಕೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
‘ಐವರಲ್ಲಿ ಇಬ್ಬರು ಪಂಜಾಬ್ದವರು ಮತ್ತು ಉಳಿದ ಮೂವರು ಕಾಶ್ಮೀರದವರು. ಇವರಿಂದ ಶಸ್ತ್ರಾಸ್ತ್ರಗಳು ಹಾಗೂ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದನೆ ಸಂಘಟನೆಗಳ ಜತೆ ಹೊಂದಿರುವ ಸಂಪರ್ಕದ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಡಿಸಿಪಿ ಪ್ರಮೋದ್ ಸಿಂಗ್ ಕುಶ್ವಾ ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.