ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಶೀಲ್ಡ್‌ ತಯಾರಕ ಸಂಸ್ಥೆ ಸೀರಂ ಇನ್‌ಸ್ಟಿಟ್ಯೂಟ್‌ನ ಅಗ್ನಿ ಅವಘಡದಲ್ಲಿ 5 ಸಾವು

Last Updated 21 ಜನವರಿ 2021, 13:24 IST
ಅಕ್ಷರ ಗಾತ್ರ

ಪುಣೆ: ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದ್ದು, ಐವರು ಮೃತಪಟ್ಟಿದ್ದಾರೆ. 9 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಬೆಂಕಿಯಿಂದಾಗಿ ಕೋವಿಶೀಲ್ಡ್ ಲಸಿಕೆ ಉತ್ಪಾದನೆಗೆ ತೊಂದರೆಯಾಗಿಲ್ಲ,' ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದರ್ ಪೂನವಾಲಾ ಹೇಳಿದ್ದಾರೆ.

'ಕೋವಿಡ್‌ ವಿರುದ್ಧ ದೇಶದಾದ್ಯಂತ ಬಳಸಲಾಗುತ್ತಿರುವ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದ ಕೋವಿಶೀಲ್ಡ್ ಲಸಿಕೆಯನ್ನು ಪುಣೆಯ ಮಂಜಿರಿಯಲ್ಲಿರುವ 'ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ' ಸಂಸ್ಥೆ ತಯಾರಿಸುತ್ತಿದೆ. ಸೀರಂ ಸಂಸ್ಥೆಯ ಆವರಣದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ದುರಂತ ಸಂಭಿಸಿದ ಕಟ್ಟಡವು ಲಸಿಕೆ ಉತ್ಪಾದನೆ ಮಾಡುತ್ತಿರುವ ಘಟಕದಿಂದ ಒಂದು ಕಿ.ಮೀ ದೂರದಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಸಂಸ್ಥೆಯ ಮುಖ್ಯಸ್ಥ ಆದರ್‌ ಪೂನಾವಾಲಾ ಅವರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT