ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಮಳೆಯ ಅಬ್ಬರ; ವಿಮಾನ ಹಾರಾಟ ವ್ಯತ್ಯಯ

Last Updated 30 ಮೇ 2022, 15:42 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದ ಪರಿಣಾಮ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ಸೋಮವಾರ ಮಧ್ಯಾಹ್ನದ ವೇಳೆಗೆ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಇದರಿಂದಾಗಿ ಐದು ವಿಮಾನಗಳ ಮಾರ್ಗ ಬದಲಿಸಲಾಗಿದ್ದು, 70 ವಿಮಾನಗಳ ಹಾರಾಟ ವಿಳಂಬವಾಯಿತು.

ಬಿರುಸಾದ ಗಾಳಿಯೊಂದಿಗೆ ಭಾರಿ ಮಳೆ ಸುರಿಯಿತು. ಹಲವಾರು ಕಾರುಗಳು ಹಾನಿಗೊಳಗಾದವು. ಮರಗಳು ಧರೆಗೆ ಉರುಳಿದವು. ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಯಿತು ಎಂದು ಮೂಲಗಳು ತಿಳಿಸಿವೆ.

ಮಳೆಯಿಂದಾಗಿ 40 ವಿಮಾನಗಳ ನಿರ್ಗಮನ ಹಾಗೂ 30 ವಿಮಾನಗಳ ಆಗಮನದಲ್ಲಿ ವ್ಯತ್ಯಯ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT