ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದ ಐವರು ಆರ್‌ಎಸ್‌ಎಸ್‌ ಮುಖಂಡರಿಗೆ ‘ವೈ’ ಶ್ರೇಣಿ ಭದ್ರತೆ ಒದಗಿಸಿದ ಕೇಂದ್ರ

Last Updated 1 ಅಕ್ಟೋಬರ್ 2022, 6:32 IST
ಅಕ್ಷರ ಗಾತ್ರ

ನವದೆಹಲಿ: ಸಂಭಾವ್ಯ ಬೆದರಿಕೆಗಳ ಹಿನ್ನೆಲೆಯಲ್ಲಿ ಕೇರಳದ ಐವರು ಆರ್‌ಎಸ್‌ಎಸ್ ನಾಯಕರಿಗೆ ಕೇಂದ್ರ ಸರ್ಕಾರವು ಶನಿವಾರ ‘ವೈ’ ಶ್ರೇಣಿಯ ಭದ್ರತೆಯನ್ನು ಒದಗಿಸಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಈ ಮುಖಂಡರನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಗುರಿ ಮಾಡಿಕೊಂಡಿದೆ ಎನ್ನಲಾಗಿದೆ. ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಪಿಎಫ್‌ಐ ಮೇಲೆ ಇತ್ತೀಚೆಗೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ನಡೆಸಿದ್ದವು. ನಂತರ ಪಿಎಫ್‌ಐ ಮೇಲೆ ನಿಷೇಧ ಹೇರಲಾಗಿತ್ತು.

ಕೇಂದ್ರೀಯ ತನಿಖಾ ದಳ ಮತ್ತು ಗುಪ್ತಚರ ಸಂಸ್ಥೆಗಳು ಕೇಂದ್ರ ಗೃಹ ಸಚಿವಾಲಯಕ್ಕೆ ನೀಡಿದ ಮಾಹಿತಿ ಮತ್ತು ಶಿಫಾರಸುಗಳ ಆಧಾರದ ಮೇಲೆ ಐವರು ಆರ್‌ಎಸ್‌ಎಸ್ ನಾಯಕರಿಗೆ ‘ವೈ’ ಶ್ರೇಣಿಯ ಭದ್ರತೆ ನೀಡಲಾಗಿದೆ.

ಐವರು ಮುಖಂಡರಿಗೆ ಭದ್ರತೆ ಒದಗಿಸುವ ಹೊಣೆಗಾರಿಕೆಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯ ವಿಐಪಿ ಭದ್ರತಾ ವಿಭಾಗಕ್ಕೆ ವಹಿಸಲಾಗಿದೆ.

ಭದ್ರತೆ ಭಾಗವಾಗಿ ಪ್ರತಿ ವ್ಯಕ್ತಿಗೆ ಸುಮಾರು ಎರಡರಿಂದ ಮೂರು ಸಶಸ್ತ್ರ ಕಮಾಂಡೊಗಳನ್ನು ಒದಗಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಬಿಹಾರದ ಬಿಜೆಪಿ ಮುಖ್ಯಸ್ಥ ಮತ್ತು ಪಶ್ಚಿಮ ಚಂಪಾರಣ್‌ನ ಸಂಸದ ಸಂಜಯ್ ಜೈಸ್ವಾಲ್‌ಗೂ ಇದೇ ರೀತಿಯ ಭದ್ರತೆ ಒದಗಿಸಲಾಗಿತ್ತು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT