ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಉಂಟಾದ ದಿಢೀರ್ ಪ್ರವಾಹ ಮತ್ತು ಭೂಕುಸಿತದಿಂದಾಗಿ ಶನಿವಾರ ಕಾಣೆಯಾಗಿದ್ದ ಐದು ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಹಿರಿಯ ಅಧಿಕಾರಿಗಳು ಭಾನುವಾರ ತಿಳಿಸಿದರು.
‘ಮಂಡಿ–ಕಟೊಲಾ–ಪರಾಶರ ರಸ್ತೆಯಲ್ಲಿ ಭೂಕುಸಿತ ಉಂಟಾಗಿ ಈ ಐವರು ಕಾಣೆಯಾಗಿದ್ದರು’ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ನಿರ್ದೇಶಕ ಸುದೇಶ್ ಕುಮಾರ್ ಮೊಕ್ತಾ ಮಾಹಿತಿ ನೀಡಿದರು.
ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಿಗೆ ರಾಜ್ಯ ವಿಪತ್ತು ಸ್ಪಂದನಾ ನಿಧಿಯಿಂದ ₹232 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ (ಕಂದಾಯ) ಓಂಕಾರ್ ಶರ್ಮಾ ತಿಳಿಸಿದರು.
ಮಂಡಿ, ಕಾಂಗ್ರಾ ಮತ್ತು ಚಾಂಬಾ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗಿತ್ತು. ಮಳೆಯಿಂದಾಗಿ 22 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿದ್ದರು.
ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ: ಶನಿವಾರ ಸುರಿದ ಭಾರಿ ಮಳೆಯಿಂದಾಗಿ ನೂರ್‌ಪುರ ತಾಲ್ಲೂಕಿನ ಚಕ್ಕಿ ನದಿಗೆ ಕಟ್ಟಲಾಗಿರುವ ರೈಲು ಸೇತುವೆಯ ಎರಡು ಪಿಲ್ಲರ್‌ಗಳು ಕುಸಿದಿತ್ತು. ಈ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ ನಡೆಸುವಂತೆ ಕಂಗ್ರಾ ಜಿಲ್ಲಾ ಮ್ಯಾಜಿಸ್ಟ್ರೇಟರ್ ನಿಪುನ್ ಜಿಂದಾಲ್ ಆದೇಶ ನೀಡಿದ್ದಾರೆ.
ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರೋಹೊತ್ ರಾಠೋರ್ ಅವರು ಘಟನೆಯ ಕುರಿತು ತನಿಖೆ ನಡೆಸಲಿದ್ದಾರೆ. 15 ದಿನಗಳ ಒಳಗೆ ಜಿಲ್ಲಾ ಮ್ಯಾಜಿಸ್ಟ್ರೇಟರ್ ಅವರಿಗೆ ವರದಿ ನೀಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿದರು. ಈ ರೈಲು ಸೇತುವೆಯನ್ನು 1928ರಲ್ಲಿ ಬ್ರಿಟಿಷರು ನಿರ್ಮಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.