ಭಾನುವಾರ, ಮಾರ್ಚ್ 7, 2021
32 °C

5 ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ: ಸ್ಥಿತಿ ಗಂಭೀರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಾಂದ(ಉತ್ತರ ಪ್ರದೇಶ): ಇಲ್ಲಿನ ಬಾಂದ ಜಿಲ್ಲೆಯ ಹಳ್ಳಿಯೊಂದರಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದ 5 ವರ್ಷದ ಹೆಣ್ಣುಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಕಾನ್ಪುರದ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದರು.

ಉತ್ತಮ ಚಿಕಿತ್ಸೆಗಾಗಿ ಮಗುವನ್ನು ಕಾನ್ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವಿಗೆ ಭಾರಿ ರಕ್ತಸ್ರಾವ ಆಗುತ್ತಿದ್ದ ಕಾರಣ ಪ್ಲಾಸ್ಟಿಕ್‌ ಸರ್ಜರಿ ಮಾಡಲಾಗುತ್ತಿದೆ ಎಂದು ಮುಖ್ಯ ಆರೋಗ್ಯಾಧಿಕಾರಿ ಉದಯ್‌ ಭಾನ್‌ ಸಿಂಗ್‌ ಹೇಳಿದರು. ಗಿರ್ವಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಇರುವ ಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿತ್ತು.

ಘಟನೆಗೆ ಸಂಬಂಧಿಸಿದಂತೆ 23 ವರ್ಷದ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ನರೇನಿ ಸಿಯಾರಾಮ್‌ ಹೇಳಿದರು. ₹10 ರೂಪಾಯಿ ನೀಡಿ ಆಮಿಷ ತೋರಿದ ಆರೋಪಿ, ಅಜ್ಞಾತ ಸ್ಥಳಕ್ಕೆ ಆಕೆಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಅವರು ತಿಳಿಸಿದರು.

ಘಟನೆಯ ಕುರಿತು ದೂರು ನೀಡಲು ಆರೋಪಿಯ ಮನೆಗೆ ಮಗುವಿನ ಮನೆಯವರು ತೆರಳಿದ ಸಂದರ್ಭದಲ್ಲಿ ಅವರಿಗೆ ಜೀವಬೆದರಿಕೆ ಹಾಕಲಾಗಿದೆ. ಪೊಕ್ಸೊ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಲಾಗಿದ್ದು, ಆರೋಪಿ ಸೇರಿದಂತೆ ಬೆದರಿಕೆ ಹಾಕಿದ್ದ ಕುಟುಂಬದ ಮೂವರು ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ನರೇನಿ ತಿಳಿಸಿದರು. ಹಳ್ಳಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು