ಉತ್ತರ ಪ್ರದೇಶ | ಅತ್ಯಾಚಾರ, ಕೊಲೆ: ಪುರೋಹಿತ ಸೇರಿ ಮೂವರ ವಿರುದ್ಧ ಪ್ರಕರಣ

ಬದಾಂಯು: ಉತ್ತರ ಪ್ರದೇಶದ ಬದಾಂಯು ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಆರೋಪದಡಿ ಪುರೋಹಿತ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಸಂತ್ರಸ್ತೆ ಭಾನುವಾರ ದೇವಾಸ್ಥಾನಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
‘ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದು ತಿಳಿದುಬಂದಿದೆ. ಪ್ರಕರಣದ ಬಗ್ಗೆ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ ಶರ್ಮಾ ಹೇಳಿದರು.
‘ಸಂತ್ರಸ್ತೆಯ ಕುಟುಂಬದವರು ದೇವಸ್ಥಾನದ ಪುರೋಹಿತ ಮತ್ತು ಆತನ ಸಹಚರರು ವಿರುದ್ಧ ದೂರು ದಾಖಲಿಸಿದ್ದರು. ಮಂಗಳವಾರ ರಾತ್ರಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ. ಆದರೆ ಪುರೋಹಿತ ತಲೆಮರಿಸಿಕೊಂಡಿದ್ದು, ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.