ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ

Last Updated 24 ಆಗಸ್ಟ್ 2021, 9:30 IST
ಅಕ್ಷರ ಗಾತ್ರ

ಚೆನ್ನೈ: ಬಂಗಾಳ ಕೊಲ್ಲಿಯ ಸಮುದ್ರದಾಳದಲ್ಲಿ ಮಂಗಳವಾರ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ ಕಂಪನದ ತೀವ್ರತೆ 5.1ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಅಧ್ಯಯನ ಕೇಂದ್ರ ತಿಳಿಸಿದೆ.

ಚೆನ್ನೈನಿಂದ ಸುಮಾರು 300 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ 12.35ರ ಸುಮಾರಿಗೆ ಭೂಕಂಪ ಸಂಭವಿಸಿದೆ.

ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ. ಆದರೆ ನಗರದ ಕೆಲವು ಭಾಗಗಳಲ್ಲಿ ಭೂಮಿ ನಡುಗಿದ ಅನುಭವ ಆಗಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಅಡ್ಯಾರ್‌ ಮತ್ತು ಸಮೀಪದ ತಿರುವಾನ್ಮಿಯೂರ್‌ಗಳಲ್ಲಿನ ನಿವಾಸಿಗಳಿಗೆ ಲಘು ಕಂಪನದ ಅನುಭವವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT