ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: 5.2ರಷ್ಟು ತೀವ್ರತೆಯ ಭೂಕಂಪ

Last Updated 7 ಜುಲೈ 2021, 6:46 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನಲ್ಲಿ ಬುಧವಾರ ಬೆಳಿಗ್ಗೆ 5.2ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಬಾಂಗ್ಲಾದೇಶ ಸೇರಿದಂತೆ ನೆರೆ ರಾಜ್ಯಗಳಾದ ಮೇಘಾಲಯ ಮತ್ತು ಪಶ್ಚಿಮ ಬಂಗಾಳದ ಉತ್ತರ ಭಾಗಗಳಲ್ಲೂ ಭೂಕಂಪದ ಅನುಭವ ಆಗಿದೆ.

‘ಅಸ್ಸಾಂನಲ್ಲಿ ಬೆಳಿಗ್ಗೆ 8.45ಕ್ಕೆ ಭೂಕಂಪ ಸಂಭವಿಸಿದ್ದು, ಗೋಲ್ಪಾರದಲ್ಲಿ 14 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ’ ಎಂದು ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ.

‘ಭೂಕಂಪ ಸಂಭವಿಸಿದ ಸ್ಥಳದಿಂದ 71 ಕಿ.ಮೀ ದೂರದಲ್ಲಿರುವ ಮೇಘಾಲಯದ ಉತ್ತರ ಭಾಗದ ತುರಾದಲ್ಲೂ ಭೂಮಿ ನಡುಗಿದ ಅನುಭವ ಆಗಿದೆ. ಗುವಾಹಟಿ ಮತ್ತು ಮೇಘಾಲಯದ ಜನರು ಭಯದಿಂದ ಮನೆಯಿಂದ ಹೊರಗೆ ಬಂದಿದ್ದಾರೆ’ ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ (ಆರ್‌ಎಂಸಿ) ಉಪನಿರ್ದೇಶಕ ಸಂಜಯ್ ಒನೀಲ್ ಶಾ ಅವರು ಹೇಳಿದರು.

‘ಅಲಿಪುರ್ದುರ್ ಮತ್ತು ಜಲಪಾಯ್‌ಗುರಿ ಸೇರಿದಂತೆ ಪಶ್ಚಿಮ ಬಂಗಾಳದ ಉತ್ತರ ಭಾಗದ ಜಿಲ್ಲೆಗಳಲ್ಲಿ ಹಾಗೂ ಢಾಕಾ, ಗೈಬಂಧ, ಬೊಗುರಾ ಮತ್ತು ರಾಜ್‌ಶಾಹಿ ಸೇರಿದಂತೆ ಬಾಂಗ್ಲಾದೇಶದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

‘ಭೂಕಂಪದಿಂದ ಯಾವುದೇ ಸಾವು–ನೋವು ವರದಿಯಾಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT