ಶುಕ್ರವಾರ, ಜನವರಿ 22, 2021
28 °C

ಜಮ್ಮು–ಕಾಶ್ಮೀರ ಡಿಡಿಸಿ ಚುನಾವಣೆ: ಶೇ 52 ಮತದಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ರದ್ದುಗೊಳಿಸಿ, ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ಬಳಿಕ ಶನಿವಾರ ಇಲ್ಲಿ ಮೊದಲ ಬಾರಿಗೆ ಚುನಾವಣಾ ಪ್ರಕ್ರಿಯೆ ನಡೆದಿದೆ. ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಯ ಮೊದಲ ಹಂತದಲ್ಲಿ ಶೇ 52 ಜನರು ಮತದಾನ ಮಾಡಿದ್ದಾರೆ.

ಎಂಟು ಹಂತದಲ್ಲಿ ಡಿಡಿಸಿ ಚುನಾವಣೆ ನಡೆಯಲಿದ್ದು, ಶನಿವಾರ ಮೊದಲನೇ ಹಂತದ ಮತದಾನ ಪ್ರಕ್ರಿಯೆಯು ಬಹುತೇಕ ಶಾಂತಿಯುತವಾಗಿ ನಡೆದಿದೆ. ದಕ್ಷಿಣ ಕಾಶ್ಮೀರದ ಕುಲ್ಗಾಂನಲ್ಲಿ ಸಣ್ಣ ಪ್ರಮಾಣದಲ್ಲಿ ಕಲ್ಲುತೂರಾಟದ ಘಟನೆ ನಡೆದಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 2ಗಂಟೆಯವರೆಗೆ ನಡೆದ ಮತದಾನ ಪ್ರಕ್ರಿಯೆಯಲ್ಲಿ, ಒಟ್ಟು 7,00,842 ಮತದಾರರ ಪೈಕಿ ಶೇ 51.76 ಜನರು ಮತ ಚಲಾಯಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಕೆ.ಕೆ.ಶರ್ಮಾ ತಿಳಿಸಿದರು.

ಜಮ್ಮುವಿನ ರಿಯಾಸಿಯಲ್ಲಿ ಅತ್ಯಧಿಕ(ಶೇ 74.62)ಮತದಾನವಾಗಿದ್ದು, ಉಗ್ರರ ಉಪಟಳ ಹೆಚ್ಚಾಗಿರುವ ಪುಲ್ವಾಮಾದಲ್ಲಿ ಕೇವಲ ಶೇ.6.7 ಮತದಾನವಾಗಿದೆ. 43 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆದಿದ್ದು, ಕಣದಲ್ಲಿ 1,475 ಅಭ್ಯರ್ಥಿಗಳಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು