ಶನಿವಾರ, ಜನವರಿ 28, 2023
20 °C

ಬೆಂಗಳೂರಿನ ವಿದ್ಯಾ ಸೇರಿ 52 ಅಂಗವಿಕಲ ಸಾಧಕರಿಗೆ ರಾಷ್ಟ್ರಪ್ರಶಸ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಬೆಂಗಳೂರಿನ ವೈ.ವಿದ್ಯಾ ಸೇರಿದಂತೆ ಒಟ್ಟು 52 ಮಂದಿ ಅಂಗವಿಕಲ ಸಾಧಕರು ರಾಷ್ಟ್ರಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಂತರರಾಷ್ಟ್ರೀಯ ಅಂಗವಿಕಲರ ದಿನಾಚರಣೆ ಅಂಗವಾಗಿ ಶನಿವಾರ ಇಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪದಕ ಪ್ರದಾನ ಮಾಡಿದರು.

ದೃಷ್ಟಿಹೀನತೆಯಿಂದ ಬಳಲುತ್ತಿರುವ 29 ವರ್ಷದ ವಿದ್ಯಾ ಅವರು ಬೆಂಗಳೂರಿನ ಐಐಟಿಯಲ್ಲಿ ಡಿಜಿಟಲ್‌ ಸೊಸೈಟಿ ವಿಷಯದಲ್ಲಿ ಎಂಎಸ್ಸಿ ಪೂರ್ಣಗೊಳಿಸಿದ್ದಾರೆ. ಅವರು 2017ರಲ್ಲಿ ವಿಷನ್‌ ಎಂಪವರ್ (ವಿಇ) ಎಂಬ ಟ್ರಸ್ಟ್‌ ಸ್ಥಾಪಿಸಿದ್ದಾರೆ. ಈ ಟ್ರಸ್ಟ್‌ ಮೂಲಕ ದೃಷ್ಟಿಹೀನತೆ ಸಮಸ್ಯೆ ಎದುರಿಸುತ್ತಿರುವವರಿಗೆ ಶಿಕ್ಷಣ ನೀಡಿ ಅವರನ್ನು ಸಶಕ್ತಗೊಳಿಸುವ ಕೆಲಸ ಮಾಡುತ್ತಿದ್ದಾರೆ.  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು