ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದಲ್ಲಿ 5.4 ತೀವ್ರತೆಯ ಭೂಕಂಪ: ದೆಹಲಿ–ಎನ್‌ಸಿಆರ್, ಉತ್ತರಾಖಂಡದಲ್ಲೂ ಕಂಪನ

Last Updated 12 ನವೆಂಬರ್ 2022, 15:43 IST
ಅಕ್ಷರ ಗಾತ್ರ

ನವದೆಹಲಿ: ನೆರೆಯ ನೇಪಾಳದಲ್ಲಿ 5.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ದೆಹಲಿ–ಎನ್‌ಸಿಆರ್ ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಕಂಪನದ ಅನುಭವವಾಗಿದೆ.

ಉತ್ತರಾಖಂಡದ ಜ್ಯೋತಿಮಠದಿಂದ 212 ಕಿ.ಮೀ ದೂರದಲ್ಲಿ ನೇಪಾಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂರು ದಿನಗಳ ಹಿಂದಷ್ಟೇ ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿ 6 ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಮತ್ತೊಮ್ಮೆ ಭೂಮಿ ಕಂಪಿಸಿದೆ. ಈ ವಾರ ನೇಪಾಳದಲ್ಲಿ ಸಂಭವಿಸಿದ 3ನೇ ಭೂಕಂಪ ಇದಾಗಿದೆ.

ನೇಪಾಳದಲ್ಲಿ ಭೂಮಿಯಿಂದ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ನೇಪಾಳದ ಸಿಲಂಗಾ ಪಟ್ಟಣದಿಂದ 3 ಕಿಮೀ ದೂರದ ಭೂಮಿಯ 10 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಭಾರತ, ಚೀನಾ ಮತ್ತು ನೇಪಾಳ ದೇಶಗಳ ಕೆಲವು ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ’ಎಂದು ಪಿಥೋರಗಢ ವಿಪತ್ತು ನಿರ್ವಹಣಾ ಅಧಿಕಾರಿ ಬಿಎಸ್ ಮಹಾರ್ ಪಿಟಿಐಗೆ ತಿಳಿಸಿದ್ದಾರೆ.

ಉತ್ತರಾಖಂಡದ ಪಿಥೋರಗಢ, ಮುನ್ಸಿಯಾರಿ ಮತ್ತು ಗಂಗೋಲಿಹಟ್‌ನಲ್ಲಿ ಭೂಕಂಪದ ವರದಿಯಾಗಿದೆ.

ಯಾವುದೇ ಹಾನಿಯ ಬಗ್ಗೆ ತಕ್ಷಣಕ್ಕೆ ವರದಿ ಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಕಂಪನದ ಅವಧಿ ದೀರ್ಘವಾಗಿತ್ತು ಎಂದು ಕೆಲವರು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಲಗಿದ್ದ ಹಾಸಿಗೆ ತೂಗಿದ ಅನುಭವವಾಯಿತು ಎಂದೂ ಮತ್ತೆ ಕೆಲವರು ಹೇಳಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT