ಬುಧವಾರ, ಡಿಸೆಂಬರ್ 8, 2021
28 °C

ಹೊಸ ಕೋವಿಡ್‌ ಪ್ರಕರಣಗಳಲ್ಲಿ ಶೇ 56 ಪ್ರಕರಣಗಳು ಐದು ರಾಜ್ಯದಲ್ಲಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದಾಖಲಾದ ಒಟ್ಟು ಕೋವಿಡ್‌–19 ಪ್ರಕರಣಗಳ ಪೈಕಿ ಶೇ 56ರಷ್ಟು ಪ್ರಕರಣಗಳು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಉತ್ತರ ಪ್ರದೇಶದಲ್ಲೇ ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಂಗಳವಾರ ತಿಳಿಸಿದೆ. 

ಇದೇ ಅವಧಿಯಲ್ಲಿ ಈ ರಾಜ್ಯಗಳಲ್ಲಿ ಕೋವಿಡ್‌ ಪಿಡುಗಿಗೆ 536 ಜನರು ಮೃತಪಟ್ಟಿದ್ದು, ಇದು ಒಟ್ಟು ಸಾವಿನ ಸಂಖ್ಯೆಯ ಶೇ 65 ರಷ್ಟಿದೆ. ಮಂಗಳವಾರ ಬೆಳಗ್ಗೆ 8 ಗಂಟೆಯವರೆಗಿನ ವರದಿಯಂತೆ ದೇಶದಲ್ಲಿ ಒಟ್ಟು 69,921 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 36,91,166ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 11,852, ಆಂಧ್ರಪ್ರದೇಶದಲ್ಲಿ 10,004, ಕರ್ನಾಟಕದಲ್ಲಿ 6,495, ತಮಿಳುನಾಡಿನಲ್ಲಿ 5,956 ಹಾಗೂ ಉತ್ತರ ಪ್ರದೇಶದಲ್ಲಿ 4,782 ಹೊಸ ಪ್ರಕರಣಗಳು ದಾಖಲಾಗಿವೆ. 

24 ಗಂಟೆಯ ಅವಧಿಯಲ್ಲಿ 819 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 65,288ಕ್ಕೆ ಏರಿಕೆಯಾಗಿದೆ. ಕಳೆದ ಐದು ದಿನದಿಂದ ನಿತ್ಯವೂ 60 ಸಾವಿರಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳುತ್ತಿದ್ದು, ಗುಣಮುಖ ಪ್ರಮಾಣ 76.94ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು