ಮುಂದಿನ ವರ್ಷ 5ಜಿ ಆರಂಭ: ಇದೇ ವರ್ಷ ತರಂಗಾಂತರಗಳ ಹರಾಜು– ಪ್ರಧಾನಿ ಮೋದಿ

ನವದೆಹಲಿ: ಮುಂದಿನ ವರ್ಷದೊಳಗಾಗಿ ದೇಶದಲ್ಲಿ 5ಜಿ ಮೊಬೈಲ್ ಸೇವೆ ಆರಂಭಕ್ಕೆ ಅಗತ್ಯವಿರುವ ತರಂಗಾಂತರಗಳ ಹರಾಜನ್ನು ಇದೇ ವರ್ಷ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು.
‘ತಂತ್ರಜ್ಞಾನ ಆಧಾರಿತ ಅಭಿವೃದ್ಧಿ’ ಎಂಬ ವಿಷಯ ಕುರಿತ ವೆಬಿನಾರ್‌ನಲ್ಲಿ ಅವರು ಮಾತನಾಡಿದರು.
‘5ಜಿ ತಂತ್ರಜ್ಞಾನದಿಂದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಾಕಷ್ಟು ವೇಗ ಸಿಗಲಿದೆ. ವೈದ್ಯವಿಜ್ಞಾನದಲ್ಲಿಯೂ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದ್ದು, ವೈದ್ಯಕೀಯ ಸಾಧನಗಳ ಉತ್ಪಾದನೆಗೂ ಗಮನ ಹರಿಸಬೇಕು’ ಎಂದು ಹೇಳಿದರು.
‘ಸಮಾಜದ ಕೊನೆಯ ವ್ಯಕ್ತಿಗೂ ವಿವಿಧ ಸೇವೆಗಳನ್ನು ತ್ವರಿತವಾಗಿ ತಲುಪಿಸಲು ಹಾಗೂ ಉದ್ಯೋಗ ಸೃಷ್ಟಿಯಲ್ಲಿ ತಂತ್ರಜ್ಞಾನ ಕ್ಷೇತ್ರ ಮಹತ್ತರ ಪಾತ್ರ ವಹಿಸುತ್ತದೆ. ಹೀಗಾಗಿ ಈ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವುದು’ ಅಗತ್ಯ ಎಂದರು.
‘ವಿಜ್ಞಾನ ಮತ್ತು ತಂತ್ರಜ್ಞಾನಗಳು ಈಗ ನಮ್ಮ ಜೀವನದ ಭಾಗಗಳೇ ಆಗಿವೆ. ಅದರಲ್ಲೂ, ಅತ್ಯಾಧುನಿಕ ತಂತ್ರಜ್ಞಾನವು ಡಿಜಿಟಲ್ ಆರ್ಥಿಕತೆಯೊಂದಿಗೆ ನಿಕಟ ಸಂಬಂಧ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ವಿವಿಧ ಸೇವೆಗಳು ಜನರಿಗೆ ತ್ವರಿತವಾಗಿ ತಲುಪುವುದು ಹಾಗೂ ನಾಗರಿಕರ ಸಬಲೀಕರಣ ಸಾಧ್ಯವಾಗಿದೆ’ ಎಂದೂ ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.