ಪುರಿ (ಪಿಟಿಐ): ಒಡಿಶಾದ ಪುರಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.

ತೀವ್ರವಾಗಿ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕಿ ಜೀವನ್ಮರಣ ಹೋರಾಟ ನಡೆಸಿದ್ದಾಳೆ. ಬಾಲಕಿಯು ಭಾನುವಾರ ಒಬ್ಬಳೇ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಆರೋಪಿಯು ಬಾಲಕಿಯ ಕುಟುಂಬಕ್ಕೆ ಪರಿಚಯಸ್ಥನಾಗಿದ್ದ. ಬಾಲಕಿ ಒಬ್ಬಳೇ ಇದ್ದಾಗ ಆಕೆಯನ್ನು ಮನೆಯ ಮೇಲ್ಭಾಗಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ. ಬಾಲಕಿಯ ತಾಯಿ ಮನೆಗೆ ಬಂದಾಗ ಮಗಳ ಕಿರುಚಾಟವನ್ನು ಕೇಳಿ ಮೇಲ್ಭಾಗಕ್ಕೆ ಧಾವಿಸಿದ್ದಾರೆ. ಆ ವೇಳೆಗಾಗಲೇ ಆರೋಪಿ ಅಲ್ಲಿಂದ ಪರಾರಿಯಾಗಿದ್ದ.

ಬಾಲಕಿಯನ್ನು ಮೊದಲು ಪುರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ಕಟಕ್‌ನ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಮನೆಗೆ ಬರುತ್ತಿದ್ದ ಚಾಲಕನನ್ನು ಆರೋಪಿ ಎಂದು ಗುರುತಿಸಲಾಗಿದೆ. ಆತನ ಪತ್ತೆಗೆ ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ವ್ಯವಸ್ಥಾಪಕ ಕೆ.ವಿ. ಸಿಂಗ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.