ರಾಯಗಢ: ಮಹಾರಾಷ್ಟ್ರದಲ್ಲಿ ಆರು ಮಕ್ಕಳ ಜೊತೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.

ಇಲ್ಲಿನದಲ್ಕತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು 6 ಮಕ್ಕಳು ಸಾವನ್ನಪ್ಪಿದ್ದಾರೆ. ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೃತಪಟ್ಟ 6 ಮಕ್ಕಳು 10 ವರ್ಷದ ಒಳಗಿನವರಾಗಿದ್ದಾರೆ. ಮೃತರಲ್ಲಿ ಒಂದು ಗಂಡು ಮಗು, ಐವರು ಹೆಣ್ಣು ಮಕ್ಕಳು ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲ್ಲ ಮೃತದೇಹಗಳನ್ನು ಹೊರತೆಗೆಯಲಾಗಿದ್ದು,ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಕುರಿತಂತೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಲಭ್ಯವಾಗಿರುವ ಸ್ಥಳೀಯ ಮಾಹಿತಿ ಪ್ರಕಾರ, ಮಹಿಳೆಯು, ಪತಿ ಜೊತೆ ಜಗಳ ಮಾಡಿಕೊಂಡು ಮಕ್ಕಳನ್ನು ಬಾವಿಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.