ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದಲ್ಲಿ ಪ್ರತ್ಯೇಕ ಅಪಘಾತ: ಒಂದೇ ದಿನ 16 ಜನ ಸಾವು

Last Updated 15 ಮೇ 2022, 11:19 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದಲ್ಲಿ ಭಾನುವಾರ ಸಂಭವಿಸಿದ ನಾಲ್ಕು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 16 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ.

ಸಿರೋಹಿ ಜಿಲ್ಲೆಯ ಪಾಲ್ದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಟ್ರಕ್‌ಗಳು ಮತ್ತು ಎರಡು ಕಾರುಗಳ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಆರು ಮಂದಿ ಮೃತಪಟ್ಟು, 9 ಮಂದಿ ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

ಆಲ್ವಾರ್‌ನಲ್ಲಿ ಆಟೊ ಒಂದಕ್ಕೆ ಟ್ರಕ್‌ ಡಿಕ್ಕಿ ಹೊಡೆದುದರಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟರು. ರಾಜಸಮಂದನಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಕೊನೆಯುಸಿರೆಳೆದರೆ, ಅಜ್ಮೀರ್‌ ಜಿಲ್ಲೆಯಲ್ಲಿ ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT