ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಲಾರಿ–ಆಟೊ ಮುಖಾಮುಖಿ ಡಿಕ್ಕಿ; ಆರು ಮಂದಿ ಸಾವು

Last Updated 29 ಜನವರಿ 2021, 12:06 IST
ಅಕ್ಷರ ಗಾತ್ರ

ಹೈದರಾಬಾದ್‌: ‘ತೆಲಂಗಾಣದ ಮೆಹಬೂಬಾಬಾದ್‌ ಜಿಲ್ಲೆಯ ಮಾರಿಮಿಟ್ಟ ಗ್ರಾಮದಲ್ಲಿ ಲಾರಿ ಹಾಗೂ ಆಟೊರಿಕ್ಷಾ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಟೊದಲ್ಲಿದ್ದ ಆರು ಮಂದಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

‘ಮೂವರು ಪುರುಷರು ಹಾಗೂ ಮೂವರು ಮಹಿಳೆಯರು ಆಟೊದಲ್ಲಿ ಪ್ರಯಾಣಿಸುತ್ತಿದ್ದರು. ಘಟನೆಗೆ ಲಾರಿ ಚಾಲಕನ ಅಜಾಗರೂಕತೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ’ ಎಂದೂ ಅವರು ಹೇಳಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT