ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಕಾನ್ಪುರದ ರಸ್ತೆ ಅಪಘಾತದಲ್ಲಿ 6 ಮಂದಿ ಸಾವು, ಹಲವರಿಗೆ ಗಾಯ

Last Updated 31 ಜನವರಿ 2022, 1:15 IST
ಅಕ್ಷರ ಗಾತ್ರ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಪಾದಚಾರಿಗಳ ಮೇಲೆ ಎಲೆಕ್ಟ್ರಿಕ್‌ ಬಸ್‌ ಹರಿದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆಯು ಕಾನ್ಪುರದ ಟ್ಯಾಟ್‌ಮಿಲ್‌ ಕ್ರಾಸಿಂಗ್‌ ಬಳಿ ನಡೆದಿದೆ. ಅಪಘಾತದಲ್ಲಿ ಮೂರು ಕಾರುಗಳಿಗೂ ಹಾನಿಯಾಗಿದೆ ಎಂದು ಪೂರ್ವ ಕಾನ್ಪುರದ ಡಿಸಿಪಿ ಪ್ರಮೋದ್ ಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಒಂಬತ್ತು ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರಮೋದ್‌ ಕುಮಾರ್‌ ಹೇಳಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ‘ಕಾನ್ಪುರ ರಸ್ತೆ ದುರಂತದ ಬಗ್ಗೆ ತಿಳಿಯಿತು. ಮೃತರ ಸಂಬಂಧಿಕರಿಗೆ ನನ್ನ ಮನದಾಳದ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ’ ಎಂದು ಪ್ರಾರ್ಥಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT