ಶನಿವಾರ, ಆಗಸ್ಟ್ 13, 2022
26 °C

ಎನ್‌ಕೌಂಟರ್‌: ಆಂಧ್ರದಲ್ಲಿ 6 ಮಾವೋವಾದಿಗಳ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಮರಾವತಿ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಬೇಗಲಮೆಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಂದಿ ನಿಷೇಧಿತ ಸಿಪಿಐ ಮಾವೋವಾದಿಗಳು ಮೃತಪಟ್ಟಿದ್ದು, ಪೊಲೀಸ್‌ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ

ಮಾಂಪಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ನಡೆದ ಎನ್‌ಕೌಂಟರ್‌ನಲ್ಲಿ ಹತರಾದವರಲ್ಲಿ ಮಾವೋವಾದಿ ಸಂಘಟನೆಯ ಹಿರಿಯ ನಾಯಕ ಮತ್ತು ಒಬ್ಬ ಮಹಿಳಾ ಸದಸ್ಯೆ ಇದ್ದಾಳೆ.

ಸ್ಥಳದಿಂದ ಎ.ಕೆ 47 ಬಂದೂಕು, ಎಸ್‌ಎಲ್‌ಆರ್‌ ಬಂದೂಕು, ಮೂರು .303 ಬಂದೂಕುಗಳು, ಒಂದು ಕಂಟ್ರಿ ರಿವಾಲ್ವಾರ್‌ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡಿನ ಚಕಮಕಿಯ ನಂತರ ಕೆಲವು ನಕ್ಸಲರು ಅರಣ್ಯದೊಳಗೆ ಪರಾರಿಯಾಗಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ ಎಂದು ಡಿಜಿಪಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು