ಮಂಗಳವಾರ, ಸೆಪ್ಟೆಂಬರ್ 21, 2021
29 °C

ಹಿಮಾಚಲ ಪ್ರದೇಶ ಭೂಕುಸಿತ: ಆರು ಶವ ಪತ್ತೆ, ಮೃತರ ಸಂಖ್ಯೆ 23ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶಿಮ್ಲಾ: ‘ಹಿಮಾಚಲ ಪ್ರದೇಶದ ಕಿನ್ನೌರ್‌ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು,  ಶನಿವಾರ ಮತ್ತೆ ಆರು ಶವಗಳು ಪತ್ತೆಯಾಗಿವೆ. ಇದರೊಂದಿಗೆ ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.

‘ಚೌರಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ 5ರಲ್ಲಿ ಆರು ಶವಗಳು ಸಿಕ್ಕಿವೆ. ಇನ್ನುಳಿದ 9 ಮಂದಿಗಾಗಿ ಶೋಧ ಮುಂದುವರಿದಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಘಟಕದ ನಿರ್ದೇಶಕ ಸುದೇಶ್‌ ಕುಮಾರ್‌ ಮೊಖ್ತಾ ಮಾಹಿತಿ ನೀಡಿದರು.

‘ಈ ಪ್ರದೇಶದಲ್ಲಿ ಭೂ ಕುಸಿತದ ಪರಿಣಾಮವಾಗಿ ಈಗಲೂ ಬಂಡೆಗಳು ಉರುಳುತ್ತಿವೆ. ಹಾಗಾಗಿ ಸಾರ್ವಜನಿಕರ ಸುರಕ್ಷತೆಗಾಗಿ ಈ ಪ್ರದೇಶದಲ್ಲಿ ರಾತ್ರಿ 9ರಿಂದ ಬೆಳಿಗ್ಗೆ 9ವರೆಗೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ನಿಚಾರ್‌ನ ಉಪ ವಿಭಾಗಾಧಿಕಾರಿ ಮನಮೋಹನ್‌ ಸಿಂಗ್‌ ಹೇಳಿದ್ಧಾರೆ.

ಈ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬಸ್‌ವೊಂದರ ಮೇಲೆ ಬಂಡೆಗಳು ಬಿದ್ದು, ಇಬ್ಬರು ಗಾಯಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು