ಭಾನುವಾರ, ಅಕ್ಟೋಬರ್ 25, 2020
28 °C

ಉನ್ನಾವ್: ಅತ್ಯಾಚಾರ ಸಂತ್ರಸ್ತೆಯ ಸಂಬಂಧಿ 6 ವರ್ಷದ ಬಾಲಕ ನಾಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಉನ್ನಾವ್: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ, ಕಳೆದ ವರ್ಷ ವಿಚಾರಣೆಗೆ ತೆರಳುವ ಮಾರ್ಗದಲ್ಲಿಯೇ ಪ್ರಕರಣದ ಆರೋಪಿಗಳು ಜೀವಂತವಾಗಿ ದಹನ ಮಾಡಿದ್ದ 23 ವರ್ಷದ ಸಂತ್ರಸ್ತೆಯ ಸಹೋದರನ ಆರು ವರ್ಷದ ಪುತ್ರ ಈಗ ನಾಪತ್ತೆಯಾಗಿದ್ದಾನೆ.

‘ಬಾಲಕ ತನ್ನ ಗ್ರಾಮದಿಂದ ಶುಕ್ರವಾರ ಸಂಜೆಯಿಂದ ನಾಪತ್ತೆಯಾಗಿದ್ದಾನೆ. ಆತನ ಪತ್ತೆಗಾಗಿ ಪೊಲೀಸರ 14 ತಂಡ ನಿಯೋಜಿಸಲಾಗಿದೆ’ ಎಂದು ಉನ್ನಾವ್ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಲಕರ್ಣಿ ತಿಳಿಸಿದ್ದಾರೆ.

ಲಖನೌ ವಲಯದ ಐ.ಜಿ ಲಕ್ಷ್ಮಿ ಸಿಂಗ್ ಅವರೂ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿ ಕುಟುಂಬ ಸದಸ್ಯರನ್ನು ಭೇಟಿಯಾಗಿದ್ದರು. ಎಲ್ಲ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದರು. ಕುಟುಂಬ ಸದಸ್ಯರ ರಕ್ಷಣೆಗಾಗಿ ನಿಯೋಜಿಸಿದ್ದ ಮೂವರು ಪೊಲೀಸರನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತುಪಡಿಸಲಾಗಿದೆ. 

ಈ ಮಧ್ಯೆ ಬಾಲಕನನ್ನು ಅಪಹರಿಸಲಾಗಿದೆ ಎಂದು ಕುಟುಂಬ ಸದಸ್ಯರು ದೂರು ನೀಡಿದ್ದು, ಸಂಬಂಧಿಕರೇ ಆಗಿರುವ ಐವರ ಹೆಸರನ್ನು ಉಲ್ಲೇಖಿಸಿದ್ದಾರೆ. ಶುಕ್ರವಾರ ಸಂಜೆ ಬಾಲಕನ ಹುಡುಕಾಟ ಯತ್ನ ವಿಫಲವಾದ ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು