ಗುರುವಾರ , ಸೆಪ್ಟೆಂಬರ್ 23, 2021
27 °C

ಶ್ರೀನಗರ: 60 ಕಾಶ್ಮೀರಿ ಯುವಕರು ನಾಪತ್ತೆ ಸುಳ್ಳೆಂದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಅಫ್ಗಾನಿಸ್ತಾನವನ್ನು ಆಗಸ್ಟ್ 15ರಂದು ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಕಣಿವೆಯ ವಿವಿಧ ಭಾಗಗಳಿಂದ 60ಕ್ಕೂ ಹೆಚ್ಚು ಯುವಕರು ನಾಪತ್ತೆಯಾಗಿದ್ದಾರೆ ಎನ್ನುವ ಕೆಲವು ಮಾಧ್ಯಮ ವರದಿಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಅಲ್ಲಗಳೆದಿದ್ದಾರೆ.

‘ಅಫ್ಗಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಕಾಶ್ಮೀರ ಕಣಿವೆಯ ವಿವಿಧ ಭಾಗಗಳಿಂದ 60 ಯುವಕರು ನಾಪತ್ತೆಯಾಗಿದ್ದಾರೆ’ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಹೆಸರನ್ನು ಉಲ್ಲೇಖಿಸಿ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡುತ್ತಿದೆ.

‘ಇದು ಸಂಪೂರ್ಣ ಸುಳ್ಳು ಸುದ್ದಿ’ ಎಂದು ಕಾಶ್ಮೀರ ಪೊಲೀಸರು ಬುಧವಾರ ಟ್ವೀಟ್ ಮಾಡಿದ್ದಾರೆ.

ಕಾಬೂಲ್ ಅನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡಾಗ ಸ್ಥಳೀಯ ಯುವಕರು ನಾಪತ್ತೆಯಾಗಿದ್ದಾರೆ ಎಂದು ಇತ್ತೀಚಿನ ದಿನಗಳಲ್ಲಿ ಹಲವು ಮಾಧ್ಯಮ ವರದಿಗಳು ಹೇಳಿವೆ. ಅಲ್ಲದೆ, ಪಾಕಿಸ್ತಾನದಿಂದ ಕಣಿವೆಯೊಳಗೆ ಹಲವು ಉಗ್ರಗಾಮಿ ಗುಂಪುಗಳು ನುಸುಳಿದ್ದು, ಹಿಂಸಾಚಾರ ಹೆಚ್ಚಾಗಿದೆ ಎಂದು ವರದಿಗಳು ಹೇಳಿವೆ. ಆದರೆ, ಕಣ್ಮರೆಯಾದ ಯುವಕರ ಬಗ್ಗೆ ಹೆಚ್ಚು ವಿವರಿಸಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು