ಶುಕ್ರವಾರ, ಫೆಬ್ರವರಿ 26, 2021
31 °C
59,649 ದೂರುಗಳ ವಿಲೇವಾರಿ: ಸಚಿವ ಹರ್ದೀಪ್‌ಸಿಂಗ್‌ ಪುರಿ ಮಾಹಿತಿ

ರೇರಾ: 60,000 ಪ್ರಾಜೆಕ್ಟ್‌ಗಳ ನೋಂದಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರದಲ್ಲಿ (ರೇರಾ) 60,000 ರಿಯಲ್‌ ಎಸ್ಟೇಟ್‌ ಪ್ರಾಜೆಕ್ಟ್‌ಗಳು ನೋಂದಣಿಯಾಗಿವೆ. 45,723 ರಿಯಲ್‌ ಎಸ್ಟೇಟ್‌ ಏಜೆಂಟರು ನೋಂದಾಯಿಸಿಕೊಂಡಿದ್ದಾರೆ ಎಂದು ವಸತಿ ಮತ್ತು ನಗರಾಡಳಿತ ವ್ಯವಹಾರಗಳ ಸಚಿವ ಹರ್ದೀಪ್‌ಸಿಂಗ್‌ ಪುರಿ ಹೇಳಿದರು.

‘ಒಟ್ಟು 34 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರೇರಾ ಅಡಿ ನಿಯಮಗಳನ್ನು ರೂಪಿಸಿ, ಅಧಿಸೂಚನೆ ಹೊರಡಿಸಿವೆ. 30 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಪ್ರಾಧಿಕಾರಗಳನ್ನು ಸ್ಥಾಪಿಸಿದ್ದರೆ, 26 ರಾಜ್ಯಗಳು ಮೇಲ್ಮನವಿ ಸಲ್ಲಿಸಲು ನ್ಯಾಯಮಂಡಳಿಗಳನ್ನು ಸ್ಥಾಪಿಸಿವೆ’ ಎಂದು ಹೇಳಿದರು.

‘ರಿಯಲ್‌ ಎಸ್ಟೇಟ್‌ ಕಂಪನಿಗಳು ಆರಂಭಿಸಿರುವ ಪ್ರಾಜೆಕ್ಟ್‌ಗಳ ಕುರಿತು ಸಮಗ್ರ ಮಾಹಿತಿ ನೀಡಲು ವಿನ್ಯಾಸಗೊಳಿಸಿರುವ ವೆಬ್‌ಪೋರ್ಟಲ್‌ಗಳಿಗೆ 26 ಪ್ರಾಧಿಕಾರಗಳು ಚಾಲನೆ ನೀಡಿವೆ’ ಎಂದೂ ಅವರು ಹೇಳಿದರು.

‘ಹಲವು ರಿಯಲ್ ಎಸ್ಟೇಟ್‌ ಕಂಪನಿಗಳ ವಿರುದ್ಧ ಸಾಕಷ್ಟು ದೂರುಗಳು ದಾಖಲಾಗಿವೆ. ವ್ಯಾಜ್ಯಗಳ ಪರಿಹಾರಕ್ಕಾಗಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವ 22 ನ್ಯಾಯಿಕ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈವರೆಗೆ 59,649 ದೂರುಗಳನ್ನು ವಿಲೇವಾರಿ ಮಾಡಲಾಗಿದೆ’ ಎಂದು ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು