ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಕಂದಕಕ್ಕೆ ಉರುಳಿ ಬಿದ್ದ ಬಸ್, 62 ಮಂದಿ ಶಬರಿಮಲೆ ಯಾತ್ರಿಕರಿಗೆ ಗಾಯ

Last Updated 28 ಮಾರ್ಚ್ 2023, 10:36 IST
ಅಕ್ಷರ ಗಾತ್ರ

ಪತ್ತನಂತಿಟ್ಟ: ಶಬರಿಮಲೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಮಂಗಳವಾರ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿ ಬಿದ್ದಿದ್ದು, ಬಸ್‌ನಲ್ಲಿದ್ದ 62 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದು ತಮಿಳುನಾಡಿಗೆ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಬಸ್‌ನಲ್ಲಿ ತಮಿಳುನಾಡಿನ ಮೈಲಾಡತುರೈ ಜಿಲ್ಲೆಯ ಒಂಬತ್ತು ಮಕ್ಕಳು ಸೇರಿದಂತೆ 64 ಯಾತ್ರಿಕರನ್ನು ಒಳಗೊಂಡಿದ್ದ ಬಸ್ ಮಧ್ಯಾಹ್ನ 1.30 ರ ಸುಮಾರಿಗೆ ನಿಲಕಲ್‌ ಬಳಿಯ ಎಲವುಂಕಲ್‌ನಲ್ಲಿ ರಸ್ತೆಯಿಂದ ಕಂದಕಕ್ಕೆ ಉರುಳಿದೆ.

ಯಾತ್ರಿಕರಲ್ಲಿ 62 ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಪತ್ತನಂತಿಟ್ಟ ಮತ್ತು ಎರುಮೇಲಿಯ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT