ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: 64 ವಿದ್ಯಾರ್ಥಿಗಳಿಗೆ ಕೋವಿಡ್‌

Last Updated 8 ಮೇ 2022, 14:38 IST
ಅಕ್ಷರ ಗಾತ್ರ

ಭುವನೇಶ್ವರ (ಪಿಟಿಐ): ಒಡಿಶಾದಲ್ಲಿ ಭಾನುವಾರ ವರದಿಯಾದ ಹೊಸ 71 ಕೋವಿಡ್‌ ಪ್ರಕರಣಗಳಲ್ಲಿ ರಾಯ್‌ಗಡ ಜಿಲ್ಲೆಯಲ್ಲಿನ ಎರಡು ವಸತಿ ನಿಲಯಗಳಲ್ಲಿ ವಾಸಿಸುತ್ತಿರುವ 64 ವಿದ್ಯಾರ್ಥಿಗಳಲ್ಲಿ ಕೋವಿಡ್‌ ದೃಢಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎರಡು ವಸತಿ ನಿಲಯಗಳ 64 ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢಪಟ್ಟಿರುವುದನ್ನು ಜಿಲ್ಲಾಧಿಕಾರಿ ಸರೋಜ್‌ ಕುಮಾರ್‌ ಮಿಶ್ರಾ ಖಚಿತಪಡಿಸಿದ್ದಾರೆ.

‘64 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದಾಗ ಅವರಿಗೆ ಕೋವಿಡ್‌ ಪತ್ತೆಯಾಗಿದೆ. ಆದರೆ ಸೋಂಕಿನ ಯಾವುದೇ ಗುಣಲಕ್ಷಣಗಳಿರಲಿಲ್ಲ. ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ. ಎಲ್ಲರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ’ ಎಂದು ಸರೋಜ್‌ ಕುಮಾರ್‌ ಹೇಳಿದರು.

ಜಿಲ್ಲೆಯ ವಸತಿನಿಲಯದಲ್ಲಿ ವಾಸಿಸುತ್ತಿರುವ 8 ಆಂಗ್ಲ ಮಾಧ್ಯಮದ ಶಾಲಾ ವಿದ್ಯಾರ್ಥಿಗಳು ಮತ್ತು ಬಿಸಾಮ್ಕಟಕ್ ಬ್ಲಾಕ್‌ನಲ್ಲಿ ಶಾಲಾ ವಸತಿನಿಲಯದಲ್ಲಿ ವಾಸಿಸುವ ಹಟಮುನಿಗುಡ ಸರ್ಕಾರಿ ಪ್ರೌಢ ಶಾಲೆಯ 20 ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢಪಟ್ಟಿದೆ.

ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಮೂಲಕ ರಾಜ್ಯದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 12,88,202 ತಲುಪಿದೆ. ಯಾವುದೇ ಸಾವು ಸಂಭವಿಸಿಲ್ಲ. ಮರಣದ ಸಂಖ್ಯೆ 9,126 ಇದೆ. ರಾಜ್ಯದಲ್ಲಿ ಸದ್ಯ 160 ಸಕ್ರಿಯ ಪ್ರಕರಣಗಳಿವೆ ಎಂದು ಅಧಿಕಾರಿಗಳು ಹೇಳಿದರು.

ಕೊಟ್ಲಗುಡಾದ ಅನ್ವೇಶಾ ವಸತಿನಿಲಯದ ನಲವತ್ನಾಲ್ಕು ನಿವಾಸಿಗಳಿಗೆ ಕೋವಿಡ್ ದೃಢಪಟ್ಟಿದೆ ಎಂದು ವಸತಿನಿಲಯದ ನಮಿತಾ ಸಮಲ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT