ಇಂಧನದ ಶೇ 68ರಷ್ಟು ತೆರಿಗೆ ಕೇಂದ್ರಕ್ಕೆ, ಬೆಲೆ ಏರಿಕೆ ದೂಷಣೆ ರಾಜ್ಯಕ್ಕೆ: ರಾಹುಲ್

ನವದೆಹಲಿ: ಇಂಧನದ ಮೇಲಿನ ತೆರಿಗೆಯ ಶೇ 68ರಷ್ಟು ಭಾಗವನ್ನು ಕೇಂದ್ರವೇ ತೆಗೆದುಕೊಳ್ಳುತ್ತಿದ್ದರೂ, ಮೋದಿ ಅವರು ಬೆಲೆ ಏರಿಕೆ ವಿಚಾರದಲ್ಲಿ ರಾಜ್ಯಗಳನ್ನು ದೂಷಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
‘ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆ ಏರಿಕೆಯ ಹೊರೆಯನ್ನು ಜನರ ಮೇಲಿಂದ ಇಳಿಸಲು ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಎಕ್ಸೈಸ್ ಸುಂಕವನ್ನು ಇಳಿಸಿತ್ತು. ರಾಜ್ಯಗಳೂ ತಮ್ಮ ಪಾಲಿನ ತೆರಿಗೆಯನ್ನು ಕಡಿತ ಮಾಡುವಂತೆ ಕೋರಿಕೊಂಡಿದ್ದೆವು. ಕೆಲವು ರಾಜ್ಯಗಳು ತೆರಿಗೆ ಕಡಿತ ಮಾಡಿದ್ದವು. ಕೆಲವು ರಾಜ್ಯಗಳು ತೆರಿಗೆ ಕಡಿತ ಮಾಡದೆ, ಅದರ ಲಾಭವನ್ನು ಜನರಿಗೆ ನೀಡಿಲ್ಲ. ಈ ಮೂಲಕ, ಆ ರಾಜ್ಯಗಳು ತಮ್ಮ ನಾಗರಿಕರಿಗೆ ಅನ್ಯಾಯ ಮಾಡಿವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅರೋಪಿಸಿದ್ದರು.
High Fuel prices - blame states
Coal shortage - blame states
Oxygen shortage - blame states68% of all fuel taxes are taken by the centre. Yet, the PM abdicates responsibility.
Modi’s Federalism is not cooperative. It’s coercive.
— Rahul Gandhi (@RahulGandhi) April 28, 2022
ಪ್ರಧಾನಿ ಅವರ ಈ ಆರೋಪಕ್ಕೆ ತಿರುಗೇಟು ನೀಡಿರುವ ರಾಹುಲ್ ಗಾಂಧಿ, ‘ ಇಂಧನ ಬೆಲೆ ಏರಿಕೆಗೆ ರಾಜ್ಯಗಳನ್ನು ದೂಷಿಸಲಾಗುತ್ತದೆ, ಕಲ್ಲಿದ್ದಲು ಕೊರತೆಗೂ ರಾಜ್ಯಗಳನ್ನು ದೂರಲಾಗುತ್ತದೆ, ಆಮ್ಲಜನಕ ಸಿಲಿಂಡರ್‌ಗಳ ಕೊರತೆ ಎದುರಾದರೂ ರಾಜ್ಯಗಳನ್ನೇ ದೂರಲಾಗುತ್ತದೆ. ಇಂಧನದ ಮೇಲಿನ ಶೇ 68 ರಷ್ಟು ತೆರಿಗೆಯನ್ನು ಕೇಂದ್ರವೇ ತೆಗೆದುಕೊಳ್ಳುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಾರೆ’ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೋದಿಯವರ ಒಕ್ಕೂಟ ವ್ಯವಸ್ಥೆಯು ಸಹಕಾರಿಯಲ್ಲ, ದಬ್ಬಾಳಿಕೆಯಿಂದ ಕೂಡಿದೆ ಎಂದೂ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಇದನ್ನೂ ಓದಿ: ಕೆಲ ರಾಜ್ಯಗಳಿಂದ ಅನ್ಯಾಯ: ಪ್ರಧಾನಿ ಮೋದಿ ಆರೋಪಕ್ಕೆ ವಿರೋಧ ಪಕ್ಷಗಳಿಂದ ಆಕ್ಷೇಪ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.