ಬುಧವಾರ, ಮಾರ್ಚ್ 29, 2023
30 °C

ಆಂಧ್ರಪ್ರದೇಶ: ಖಾದ್ಯ ತೈಲ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಜನ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಕಾಕಿನಾಡ(ಆಂಧ್ರಪ್ರದೇಶ): ಇಲ್ಲಿನ ರಾಗಂಪೇಟೆಯ ಖಾದ್ಯ ತೈಲ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಏಳು ಕಾರ್ಮಿಕರು ಗುರುವಾರ ಆಯಿಲ್ ಟ್ಯಾಂಕ್‌ನನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ  ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಈ ದುರ್ಘಟನೆಯು ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಮೃತರು ಪೆದ್ದಾಪುರಂ, ಪುಲಿಮೇರು ಮೂಲದವರು.

ಮೊದಲು ಒಬ್ಬ ವ್ಯಕ್ತಿ ಟ್ಯಾಂಕ್ ಸ್ವಚ್ಛಗೊಳಿಸಲು ತೈಲ ಟ್ಯಾಂಕ್‌ನೊಳಗೆ ಇಳಿದಿದ್ದರು. ನಂತರ ಅವರು ಮೇಲಕ್ಕೆ ಬರದ ಕಾರಣ ಇನ್ನೊಬ್ಬರು ಟ್ಯಾಂಗ್‌ಗೆ ಇಳಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಘಟನೆಗೆ ಪ್ರತಿಕ್ರಿಯಿಸಿರುವ ಸಂತ್ರಸ್ತರ ಕುಟುಂಬಸ್ಥರು, ಕಾರ್ಖಾನೆ ಆಡಳಿತವು ಕಾರ್ಮಿಕರಿಗೆ ಸೂಕ್ತ ಭದ್ರತೆ ಒದಗಿಸಿಲ್ಲ ಎಂದು ಆರೋಪಿಸಿದ್ದಾರೆ.  

ಇವನ್ನೂ ಓದಿ: 

                 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು