ಭಾನುವಾರ, ನವೆಂಬರ್ 27, 2022
26 °C

ಕಮರಿಗೆ ಬಿದ್ದ ಟೆಂಪೊ ಟ್ರಾವೆಲರ್‌: 7 ಸಾವು, 10 ಮಂದಿಗೆ ಗಾಯ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಮ್ಲಾ:  ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಭಾನುವಾರ ಸಂಜೆ ಟೆಂಪೋ ಟ್ರಾವೆಲರ್‌ ಕಮರಿಗೆ ಬಿದ್ದ ಪರಿಣಾಮ ಏಳು ಮಂದಿ ಮೃಪಟ್ಟಿದ್ದಾರೆ. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಶಾಸಕರೊಬ್ಬರು ತಿಳಿಸಿದ್ದಾರೆ.

ಬಂಜಾರ್‌ನ ಬಿಜೆಪಿ ಶಾಸಕ ಸುರೇಂದರ್ ಶೌರಿ ಅವರು ಸೋಮವಾರ ಮಧ್ಯರಾತ್ರಿ 12.45 ರ ಸುಮಾರಿಗೆ  ಸ್ಥಳದಿಂದಲೇ ನೇರವಾಗಿ ಫೇಸ್‌ಬುಕ್ ಲೈವ್‌ ಮಾಡಿದ್ದಾರೆ. ಬಂಜಾರ್ ಉಪವಿಭಾಗದ ಘಿಯಾಘಿ ಬಳಿ ಸಂಭವಿಸಿದ ಅಪಘಾತದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ.

ಗಾಯಾಳುಗಳನ್ನು ಮೊದಲಿಗೆ ಬಂಜಾರ್ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಕುಲು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಮೃತರು ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ನಿವಾಸಿಗಳಾಗಿದ್ದಾರೆ ಎಂದು ಶಾಸಕ ಶೌರಿ ಹೇಳಿದ್ದಾರೆ. ಎಲ್ಲರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದಿದ್ದಾರೆ. 

ಕತ್ತಲೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆ ನಡೆಸಿದ ಜಿಲ್ಲಾಡಳಿತ ಮತ್ತು ಸ್ಥಳೀಯರಿಗೆ ಶೌರಿ ಧನ್ಯವಾದ ತಿಳಿಸಿದ್ದಾರೆ.

ಇವುಗಳನ್ನೂ ಓದಿ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು