ಶುಕ್ರವಾರ, ಮೇ 20, 2022
22 °C

7 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ, ಕಬ್ಬಿನ ಗದ್ದೆಯೊಳಗೆ ಬಾಲಕಿ ಮೃತದೇಹ ಪತ್ತೆ!

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಮೊರಾದಾಬಾದ್, (ಉತ್ತರ ಪ್ರದೇಶ): 7 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಬಳಿಕ ಹತ್ಯೆ ಮಾಡಲಾಗಿರುವ ಘಟನೆ ಮೊರಾದಾಬಾದ್‌ನ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಾಲಕಿ, ಮನೆಯ ಮುಂದೆ ಆಟವಾಡುತ್ತಿದ್ದಾಗ ಡಿಸೆಂಬರ್ 22ರಂದು ಕಾಣೆಯಾಗಿದ್ದಳು. ಈ ಸಂಬಂಧ ಕುಟುಂಬಸ್ಥರು ದೂರು ದಾಖಲಿಸಿದ ಮೇರೆಗೆ ಎರಡು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಆದರೆ ಬಾಲಕಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.

ರೈತರೊಬ್ಬರು ತಮ್ಮ ಜಮೀನಿಗೆ ತೆರಳಿದಾಗ ಕೊಳೆತ ಶವದ ವಾಸನೆ ಬಂದಿದೆ. ಬಳಿಕ ಹುಡುಕಾಡಿದಾಗ ಬಾಲಕಿಯ ಮನೆಯಿಂದ 2 ಕಿ.ಮೀ ದೂರದಲ್ಲಿದ್ದ ಕಬ್ಬಿನ ಗದ್ದೆಯಲ್ಲಿ ಶವ ಬಿದ್ದಿರುವುದು ಶುಕ್ರವಾರ ರಾತ್ರಿ ಪತ್ತೆಯಾಗಿತ್ತು.

ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ. ಬಾಲಕಿಯ ತಂದೆ ತರಕಾರಿ ವ್ಯಾಪಾರಿಯಾಗಿದ್ದು, ಅವರಿಗೆ ನಾಲ್ವರು ಮಕ್ಕಳಿದ್ದರು.

ಈ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ ಮತ್ತು ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು