ಬುಧವಾರ, ಅಕ್ಟೋಬರ್ 28, 2020
20 °C

ಆತ್ಮಹತ್ಯೆಗೆ ಅತ್ಯಾಚಾರ ಸಂತ್ರಸ್ತೆ ಯತ್ನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಾಗ್‌ಪತ್‌, ಉತ್ತರಪ್ರದೇಶ: ನೆರೆ ಮನೆಯ ವ್ಯಕ್ತಿಯಿಂದ ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಸಂತ್ರಸ್ತೆ ತಂದೆ ನೀಡಿದ ದೂರಿನ ಮೇರೆಗೆ ನಸೀಂ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ನಸೀಂ ಎಂಬಾತ ಸಂತ್ರಸ್ತೆಗೆ ಬೆದರಿಕೆಯನ್ನೂ ಒಡ್ಡುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸೆಪ್ಟೆಂಬರ್‌ 27ರಂದು ಸಂತ್ರಸ್ತೆ ವಿಷ ಸೇವಿಸಿ ಪ್ರಜ್ಞಾಹೀನರಾಗಿದ್ದರು. ಸೂಕ್ತ ಉಪಚಾರದ ಬಳಿಕ ಪ್ರಜ್ಞೆ ಮರಳಿದ ಮೇಲೆ ಆಕೆ ಘಟನೆಯನ್ನು ತಂದೆಗೆ ವಿವರಿಸಿದ್ದರು.

ಆರೋಪಿಯನ್ನು ಬಂಧಿಸಿದ್ದು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅಭಿಷೇಕ್‌ ಸಿಂಗ್‌ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು