ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

70 ವರ್ಷಗಳ ಯಮುನಾ ಮಲಿನ 2 ದಿನದಲ್ಲಿ ಶುದ್ಧಗೊಳಿಸಲು ಸಾಧ್ಯವಿಲ್ಲ: ಕೇಜ್ರಿವಾಲ್

Last Updated 18 ನವೆಂಬರ್ 2021, 13:56 IST
ಅಕ್ಷರ ಗಾತ್ರ

ನವದೆಹಲಿ: 70 ವರ್ಷಗಳ ಅವಧಿಯಲ್ಲಿ ಮಲಿನಗೊಂಡಿರುವ ಯಮುನಾ ನದಿಯನ್ನು ಕೇವಲ ಎರಡು ದಿನದಲ್ಲಿ ಶುದ್ಧಗೊಳಿಸಲು ಸಾಧ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಂಜ್ರಿವಾಲ್ ಗುರುವಾರ ಹೇಳಿದ್ದಾರೆ.

'2015ರ ದೆಹಲಿ ಚುನಾವಣೆ ವೇಳೆ, ನಾನು ಮುಂದಿನ ಚುನಾವಣೆ ವೇಳೆಗೆ ಯಮುನಾ ನದಿಯನ್ನು ಶುದ್ಧಗೊಳಿಸುವುದಾಗಿ ಜನರಿಗೆ ಭರವಸೆ ನೀಡಿದ್ದೆ. ಈ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕೆಲಸವನ್ನು ಆರಂಭಿಸಿದ್ದೇವೆ. ವೈಯಕ್ತಿಕವಾಗಿ ನಾನು ಮೇಲ್ವಿಚಾರಣೆ ನಡೆಸುತ್ತಿದ್ದೇನೆ' ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:

2025ರ ಫೆಬ್ರುವರಿ ವೇಳೆಗೆ ಯಮುನಾ ನದಿಯ ನೀರನ್ನು ಸ್ನಾನಕ್ಕೆ ಬಳಸುವಷ್ಟು ಶುದ್ಧಗೊಳಿಸಲು ಆರು ಅಂಶಗಳ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದವರು ಹೇಳಿದ್ದಾರೆ.

ದೆಹಲಿ ಸರ್ಕಾರವು ತ್ಯಾಜ್ಯ ನೀರನ್ನು ಸಂಸ್ಕರಿಸಲು ನೂತನ ಘಟಕಗಳನ್ನು ನಿರ್ಮಿಸುತ್ತಿದೆ. ಅಲ್ಲದೆ ಈಗಿರುವ ಒಳಚರಂಡಿಗಳನ್ನು ನವೀಕರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT