ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

719 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ವಿಳಂಬ: ಗಡ್ಕರಿ

Last Updated 14 ಡಿಸೆಂಬರ್ 2022, 15:28 IST
ಅಕ್ಷರ ಗಾತ್ರ

ನವದೆಹಲಿ: ‘ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿದ ಒಟ್ಟು 719 ಯೋಜನೆಗಳು ವಿಳಂಬವಾಗಿವೆ. ಈ ಪೈಕಿ 438 ಯೋಜನೆಗಳು ಪ್ರಸಕ್ತ ಸಾಲಿನಲ್ಲೇ ಪೂರ್ಣಗೊಳ್ಳಲಿವೆ’ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಬುಧವಾರ ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

‘ಸರ್ಕಾರವು ಮಂಜೂರಾಗಿರುವ ಯೋಜನೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿದೆ. ಹೀಗಾಗಿಯೇ ವಿವಿಧ ರಾಜ್ಯಗಳಲ್ಲಿನ 719 ಯೋಜನೆಗಳು ವಿಳಂಬವಾಗಿರುವುದನ್ನು ಪತ್ತೆಹಚ್ಚಲು ಸಾಧ್ಯವಾಗಿದೆ’ ಎಂದು ಹೇಳಿದ್ದಾರೆ.

‘ಕೆಲ ರಾಜ್ಯಗಳಲ್ಲಿ ನಿಗದಿಗಿಂತಲೂ ಅಧಿಕ ಮಳೆಯಾಗಿದೆ. ಕೋವಿಡ್‌, ಭೂ ಸ್ವಾಧೀನ ಪ್ರಕ್ರಿಯೆಗೆ ಅಡಚಣೆ, ಆರ್ಥಿಕ ಮುಗ್ಗಟ್ಟು ಹೀಗೆ ವಿವಿಧ ಕಾರಣಗಳಿಂದಾಗಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಭೂ ಸ್ವಾಧೀನ ಪ್ರಕ್ರಿಯೆಗೆ ಉಂಟಾಗುತ್ತಿರುವ ಅಡ್ಡಿಗಳನ್ನು ನಿವಾರಿಸುವ ಉದ್ದೇಶದಿಂದ ಕೇಂದ್ರವು ಯೋಜನಾ ಅನುಷ್ಠಾನದ ಏಜೆನ್ಸಿಗಳು, ರಾಜ್ಯಗಳು ಹಾಗೂ ಗುತ್ತಿಗೆದಾರರೊಂದಿಗೆ ನಿರಂತರ ಸಭೆಗಳನ್ನು ನಡೆಸುತ್ತಿದೆ. ಆ ಮೂಲಕ ವಿಳಂಬವಾಗಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT