ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update: ಹೊಸದಾಗಿ 7,231 ಪ್ರಕರಣ ದೃಢ, 45 ಮಂದಿ ಸಾವು

Last Updated 31 ಆಗಸ್ಟ್ 2022, 6:14 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 7,231 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 45 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 64,667ಕ್ಕೆ ಇಳಿಕೆಯಾಗಿದೆ.

ಕಳೆದ 24 ತಾಸಿನಲ್ಲಿ 10,828 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ 4,38,35,852 ಮಂದಿ ಗುಣಮುಖರಾಗಿದ್ದಾರೆ.

ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 2.05 ಮತ್ತು ವಾರದ ಪಾಸಿಟಿವಿಟಿ ಪ್ರಮಾಣ ಶೇ 2.55 ಆಗಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.15 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.67 ಆಗಿದೆ.

ದೇಶದಲ್ಲಿ ಈವರೆಗೆ 88.58 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 212.39 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT