ಶುಕ್ರವಾರ, ಆಗಸ್ಟ್ 19, 2022
22 °C

ಶೇ 75ರಷ್ಟು ವಯಸ್ಕರಿಗೆ ಕೋವಿಡ್ ಲಸಿಕೆ: ಮಹತ್ವದ ಸಾಧನೆ ಎಂದ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದ ಶೇ 75ರಷ್ಟು ವಯಸ್ಕರು ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ. ಲಸಿಕಾ ಅಭಿಯಾನದಲ್ಲಿ ಇದು ಮಹತ್ವದ ಸಾಧನೆ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದಕ್ಕಾಗಿ ದೇಶದ ನಾಗರಿಕರನ್ನು ಅಭಿನಂದಿಸಿದ್ದಾರೆ.

ಶೇ 75ರಷ್ಟು ಮಂದಿಗೆ 2 ಡೋಸ್ ಲಸಿಕೆ ನೀಡಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಟ್ವೀಟ್ ಮಾಡಿದ್ದರು. ಇದನ್ನು ಉಲ್ಲೇಖಿಸಿದ ಮೋದಿ, ಮಹತ್ವದ ಸಾಧನೆಗಾಗಿ ನಾಗರಿಕರನ್ನು ಅಭಿನಂದಿಸಿದ್ದಾರೆ.

ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಿದ ಎಲ್ಲರ ಬಗ್ಗೆ ಹೆಮ್ಮೆ ಇದೆ ಎಂದು ಪ್ರಧಾನಿ ಹೇಳಿದ್ದಾರೆ. ದೇಶದಲ್ಲಿ ಈವರೆಗೆ 165.70 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು