ಶನಿವಾರ, ಮೇ 21, 2022
25 °C

ಜಾರ್ಖಂಡ್‌: ಟ್ರಕ್‌ಗೆ ಬಸ್‌ ಡಿಕ್ಕಿ, 75 ಮಂದಿ ಯಾತ್ರಿಕರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಹಜಾರಿಬಾಗ್‌: ಜಾರ್ಖಂಡ್‌ನ ಹಜಾರಿಬಾಗ್‌ ಜಿಲ್ಲೆಯ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಟ್ರಕ್‌ವೊಂದಕ್ಕೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಪಶ್ಚಿಮ ಬಂಗಾಳದ ಸುಮಾರು 75 ಮಂದಿ ಪ್ರವಾಸಿಗರು ಗಾಯಗೊಂಡಿದ್ದು 9 ಮಂದಿಯ ಸ್ಥಿತಿ ಗಂಭೀರವಾಗಿದೆ.

ರಾಷ್ಟ್ರೀಯ ಹೆದ್ದಾರಿ 2ರ ದನುವಾ–ಭನುವಾ ಘಾಟ್‌ನಲ್ಲಿ ಈ ಅಪಘಾತ ಸಂಭವಿಸಿದೆ. ಪ್ರವಾಸಿಗರು ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿರುವ ಬಶೀರ್‌ಹತ್‌ನಿಂದ ಬೋಧಗಯಾಗೆ ಹೋಗುತ್ತಿದ್ದರು ಎಂದು ಪೊಲೀಸರು ಹೇಳಿದರು.

ಅಪಘಾತದಲ್ಲಿ ಗಾಯಗೊಂಡ ಯಾತ್ರಿಕರಿಗೆ ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ, ಗಂಭೀರವಾಗಿ ಗಾಯಗೊಂಡ 9 ಮಂದಿಯನ್ನು ಹಜಾರಿಬಾಗ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿತ್ತು.

ಆದರೆ, 9 ಮಂದಿ ಯಾತ್ರಿಕರ ಸಂಬಂಧಿಕರು ಅವರನ್ನು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ದಿದ್ದಾರೆ. ಯಾತ್ರಿಕರು ಬಿಹಾರದಲ್ಲಿನ ಬೋಧಗಯಾ ದರ್ಶನದ ನಂತರ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳಲು ಯೋಜಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು