ಶುಕ್ರವಾರ, ಆಗಸ್ಟ್ 12, 2022
23 °C
ಸ್ವಾತಂತ್ರ್ಯ ಅಮೃತಮಹೋತ್ಸವ

10 ವರ್ಷಗಳಿಂದ ಜೈಲಿನಲ್ಲಿರುವ ಕೈದಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಳೆದ 10 ವರ್ಷಗಳಿಂದ ಜೈಲಿನಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಎಸ್‌.ಕೆ.ಕೌಲ್‌ ಮತ್ತು ಎಂ.ಎಂ.ಸುಂದರೇಶ್‌ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ, ‘ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ನಿತ್ರಾಣಗೊಂಡಿರುವ ಕೈದಿಗಳನ್ನು ಜಾಮೀನು ಆಧಾರದಲ್ಲಿ ಬಿಡುಗಡೆ ಮಾಡಬೇಕು. 14 ವರ್ಷಗಳ ಕಾಲ ಜೈಲಿನಲ್ಲಿರುವ ಕೈದಿಗಳ ಶಿಕ್ಷೆಯ ಅವಧಿಯನ್ನು ಕಡಿತಗೊಳಿಸಬೇಕು’ ಎಂದು ತಿಳಿಸಿದೆ. ಸಾಧ್ಯವಾದರೆ ಶಿಕ್ಷೆ ಕಡಿತಕ್ಕೆ ಏಕರೂಪ ನೀತಿಯನ್ನು ಜಾರಿ ಮಾಡಬಹುದು ಎಂದು ಸಲಹೆ ನೀಡಿದೆ.

ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರುವ ಕೈದಿಗಳನ್ನು 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಾದರೂ ಬಿಡುಗಡೆ ಮಾಡಲು ಕ್ರಮಕೈಗೊಳ್ಳುವ ಅಗತ್ಯವಿದೆ ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು