ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Updates: ಹೊಸದಾಗಿ 796 ಪ್ರಕರಣಗಳು ದೃಢ

Last Updated 17 ಮಾರ್ಚ್ 2023, 5:50 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 796 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 109 ದಿನಗಳ ಬಳಿಕ 5,000 ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

ಈವರೆಗಿನ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4.46 ಕೋಟಿಗೆ (4,46,93,506) ಏರಿದೆ. 24 ಗಂಟೆಗಳಲ್ಲಿ ಐದು ಮಂದಿ ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,795ಕ್ಕೆ ಏರಿದೆ.

ಕರ್ನಾಟಕ, ಹಿಮಾಚಲಪ್ರದೇಶ, ಪುದುಚೇರಿ, ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 5,026ರಷ್ಟಾಗಿದ್ದು, ಚೇತರಿಕೆ ದರ ಶೇಕಡ 98.80ರಷ್ಟಿದೆ. ದೇಶದಲ್ಲಿ 220.64 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ದೇಶದಾದ್ಯಂತ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿದ್ದು, ಇದನ್ನು ನಿಯಂತ್ರಿಸಬೇಕು ಎಂದು ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಗುರುವಾರ ಪತ್ರ ಬರೆದಿದೆ.

ಮಹಾರಾಷ್ಟ್ರ, ಗುಜರಾತ್‌, ತೆಲಂಗಾಣ, ತಮಿಳುನಾಡು, ಕೇರಳ ಹಾಗೂ ಕರ್ನಾಟಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ವೈರಲ್‌ ಸೋಂಕಿನ ಹಠಾತ್‌ ಹೆಚ್ಚಳದ ಬಗ್ಗೆ ಗಮನ ವಹಿಸಬೇಕು ಎಂದು ಹೇಳಿತ್ತು. ಅಲ್ಲದೇ, ಪರೀಕ್ಷೆ, ಚಿಕಿತ್ಸೆ, ಟ್ರ್ಯಾಕಿಂಗ್‌ ಹಾಗೂ ಲಸಿಕೀಕರಣವನ್ನು ತೀವ್ರಗತಿಯಲ್ಲಿ ಮಾಡಬೇಕು ಎಂದು ಸಲಹೆ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT