ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಬಿಜೆಪಿ ತೊರೆದ ಮತ್ತೊಬ್ಬ ಒಬಿಸಿ ಶಾಸಕ ಮುಖೇಶ್ ವರ್ಮಾ

Last Updated 13 ಜನವರಿ 2022, 14:10 IST
ಅಕ್ಷರ ಗಾತ್ರ

ಲಖನೌ: ವಿಧಾನಸಭೆ ಚುನಾವಣೆಗೆ ಒಂದು ತಿಂಗಳು ಬಾಕಿ ಇರುವಾಗ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷ ತೊರೆದ ಶಾಸಕರ ಸಂಖ್ಯೆ 7ಕ್ಕೆ ಏರಿದೆ. ಹಿಂದುಳಿದ ವರ್ಗಗಳ ನಾಯಕ ಮುಖೇಶ್ ವರ್ಮಾ ಇಂದು ಬಿಜೆಪಿ ತೊರೆದಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶಾಸಕರ ವಲಸೆ ಪ್ರಾರಂಭಿಸಿದ ಸ್ವಾಮಿ ಪ್ರಸಾದ್ ಮೌರ್ಯ ಅವರ ಮನೆಯಲ್ಲಿ ವರ್ಮಾ ಕಾಣಿಸಿಕೊಂಡಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಾಸಕರಾದ ಮುಖೇಶ್ ವರ್ಮಾ, ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಕಳೆದ ಮೂರು ದಿನಗಳಲ್ಲಿ ಬಿಜೆಪಿಯನ್ನು ತೊರೆದ ಇತರೆ ಮೂವರು ನಾಯಕರ ರೀತಿ ಒಬಿಸಿ (ಇತರ ಹಿಂದುಳಿದ ವರ್ಗ) ನಾಯಕರೆಂದು ಗುರುತಿಸಿಕೊಂಡಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮುಖೇಶ್ ವರ್ಮಾ ರಾಜೀನಾಮೆ ನೀಡಿದ್ದಾರೆ.

‘ಸ್ವಾಮಿ ಪ್ರಸಾದ್ ಮೌರ್ಯ ನಮ್ಮ ನಾಯಕರು, ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಬೆಂಬಲಿಸುತ್ತೇವೆ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ನಾಯಕರು ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ’ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಹಿಂದುಳಿದ ವರ್ಗಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಪಕ್ಷ ತೊರೆದಿದ್ದಾಗಿ ಈ ಹಿಂದೆ ಪಕ್ಷ ತೊರೆದ ಶಾಸಕರು ನೀಡಿದ ಕಾರಣವನ್ನೇ ವರ್ಮಾ ನೀಡಿದ್ದಾರೆ. ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ‘ದಮನಿತರ ಧ್ವನಿ’ಮತ್ತು ‘ನಮ್ಮ ನಾಯಕ’ಎಂದು ಕರೆದಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT